ರಾಜ್ಯ

500 ಕೋಟಿ ರೂ. ವಂಚನೆ: ಬೆಂಗಳೂರಿನಲ್ಲಿ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥನ ಬಂಧನ

Lingaraj Badiger

ಬೆಂಗಳೂರು: 500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಓಜಾ ಅವರನ್ನು ಇಲ್ಲಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು 10 ದಿನಗಳ ಇಡಿ ಕಸ್ಟಡಿಗೆ ನೀಡಲಾಗಿದೆ.

ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆಯ ಹೆಸರಿನಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಓಜಾ ವಿರುದ್ಧ ಕರ್ನಾಟಕ ಪೊಲೀಸರು ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು ಇಡಿ ತಿಳಿಸಿದೆ.

ವಿವಿಧ ಗುಂಪುಗಳು ಮತ್ತು ವ್ಯಕ್ತಿಗಳು ಕೈಗೊಂಡ ವಿವಿಧ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ದೂರುದಾರರು ಒಟ್ಟು 526 ಕೋಟಿ ರೂಪಾಯಿ ಹೂಡಿಕೆ ಮಾಡಿರುವುದು ನಮ್ಮ ತನಿಖೆಯಿಂದ ತಿಳಿದುಬಂದಿದೆ ಎಂದು ಇಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೂರುದಾರರು ಮಾಡಿದ ಒಟ್ಟು 526 ಕೋಟಿ ರೂಪಾಯಿ ಹೂಡಿಕೆಯಲ್ಲಿ 121.5 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಓಜಾ ನೇತೃತ್ವದ ಕರಣ್ ಗ್ರೂಪ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಕೈಗೊಂಡ ರಿಯಲ್ ಎಸ್ಟೇಟ್ ಯೋಜನೆಯಲ್ಲಿ ಹೂಡಿಕೆ ಮಾಡಲಾಗಿದೆ ಎಂದು ಇಡಿ ತಿಳಿಸಿದೆ.

SCROLL FOR NEXT