ರಾಜ್ಯ

ಪ್ರಧಾನಿ ರೋಡ್ ಶೋ ವೇಳೆ ಭದ್ರತಾ ಲೋಪ: ಮೋದಿಗೆ ಹಾರ ಹಾಕಲು ಯತ್ನಿಸಿದ ಯುವಕ! ವಿಡಿಯೋ

Nagaraja AB

ಹುಬ್ಬಳ್ಳಿ: ರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ ನೀಡಲು ಗುರುವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿರುವಾಗ ಭದ್ರತಾ ಲೋಪವಾಗಿದೆ.

ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ವೇಳೆಯಲ್ಲಿ ಭದ್ರತೆಯನ್ನು ಮೀರಿದ ಯುವಕನೊಬ್ಬ ಪ್ರಧಾನಿ ಮೋದಿ ಬಳಿಗೆ ತೆರಳಿ ಹೂವಿನ ಹಾರ ಹಾಕಲು ಯತ್ನಿಸಿದ್ದಾನೆ.

ಈ ವೇಳೆ ಪ್ರಧಾನಿ ಮೋದಿ ಬಾಲಕನಿಂದ ಹೂವಿನ ಹಾರ ಪಡೆದು ಕಾರಿನ ಮೇಲೆ ಹಾಕಿದ್ದಾರೆ. ಬಳಿಕ ಪೊಲೀಸರು ಆ ಯುವಕನನ್ನು ವಶಕ್ಕೆ ಪಡೆದಿದ್ದಾರೆ.

SCROLL FOR NEXT