ಸಂಗ್ರಹ ಚಿತ್ರ 
ರಾಜ್ಯ

ಮೆಟ್ರೋ ಪಿಲ್ಲರ್ ಕುಸಿತ ದುರಂತ ಬಳಿಕ ಎಚ್ಚೆತ್ತ ಬಿಎಂಆರ್'ಸಿಎಲ್: ನಿರ್ಮಾಣ ಸ್ಥಳಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಲು ಸಿದ್ಧತೆ!

ಎಚ್‌ಬಿಆರ್‌ ಲೇಔಟ್‌ನಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಕುಸಿದುಬಿದ್ದು ತಾಯಿ ಮತ್ತು ಮಗು ದುರ್ಮರಣವನ್ನಪ್ಪಿದ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್'ಸಿಎಲ್ ಅಧಿಕಾರಿಗಳು ಇದೀಗ ನಿರ್ಮಾಣ ಸ್ಥಳಗಳಿಗೆ ಮಾರ್ಗಸೂಚಿ ಹೊರಡಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಎಚ್‌ಬಿಆರ್‌ ಲೇಔಟ್‌ನಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಕುಸಿದುಬಿದ್ದು ತಾಯಿ ಮತ್ತು ಮಗು ದುರ್ಮರಣವನ್ನಪ್ಪಿದ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್'ಸಿಎಲ್ ಅಧಿಕಾರಿಗಳು ಇದೀಗ ನಿರ್ಮಾಣ ಸ್ಥಳಗಳಿಗೆ ಮಾರ್ಗಸೂಚಿ ಹೊರಡಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು, ಎಚ್‌ಬಿಆರ್ ಲೇಔಟ್‌ನ ಹೊರ ವರ್ತುಲ ರಸ್ತೆಯಲ್ಲಿ ಪಿಲ್ಲರ್‌ಗೆ ತಯಾರಾಗಿದ್ದ ಕಬ್ಬಿಣದ ಸರಳುಗಳ ಎತ್ತರವನ್ನು ಕಡಿಮೆ ಮಾಡಲಾಗಿದೆ. ಈ ರಚನೆಗಳು 10 ಮೀ ಮೀರಬಾರದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆಲ್ಲದೆ, ನಿರ್ಮಾಣ ಸ್ಥಳಗಳಿಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿತ್ತಿರುವುದಾಗಿ ತಿಳಿಸಿದ್ದಾರೆ.

ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸರು ಸ್ಥಳದಲ್ಲಿರುವ ಬಿಎಂಆರ್‌ಸಿಎಲ್ ಕಚೇರಿಗಳಿಗೆ ಭೇಟಿ ನೀಡಿ ಎಂಜಿನಿಯರ್‌ಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಅಪಘಾತದ ಸ್ಥಳದಲ್ಲಿ ತಾಂತ್ರಿಕ ತನಿಖೆಗಾಗಿ ಪೊಲೀಸರು ಸ್ವತಂತ್ರ ಸಂಸ್ಥೆಗಳ ಸಹಾಯವನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!