ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗದಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ

ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಖಚಿತ ಮಾಹಿತಿ ಮೇರೆಗೆ ಶುಕ್ರವಾರ ಬೆಳಗ್ಗೆ 5.30ಕ್ಕೆ ತುಂಗಾನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದು, ಅಷ್ಟರಲ್ಲಾಗಲೇ 7 ಹಸುಗಳ ಮಾರಣಹೋಮ ನಡೆದುಹೋಗಿದೆ.

ಸೂಳೆಬೈಲಿನ ಅಜೀಜ್ ಎಂಬುವರ ಮನೆ ಹಿಂಭಾಗದ ಶೆಡ್​ನಲ್ಲಿ ಮಾಂಸಕ್ಕಾಗಿ ಗೋವುಗಳನ್ನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ಅಕ್ರಮ ಕಸಾಯಿ ಖಾನೆಯಲ್ಲಿದ್ದ ಉಳಿದ 10 ಹಸುಗಳನ್ನ ಪೊಲೀಸರು ರಕ್ಷಣೆ ಮಾಡಿದ್ದು, ಗೋಶಾಲೆಗೆ ಸ್ಥಳಾಂತರ ಮಾಡಲಾಗಿದೆ.

ಅಧಿಕಾರಿಗಳ ದಾಳಿ ಬೆನ್ನಲ್ಲೇ ಆರೋಪಿಗಳು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಇಟಲಿಯಲ್ಲಿ ಪ್ರಧಾನಿ ಮೋದಿ: “ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್” ಎಂದು ಆತ್ಮೀಯ ಸ್ವಾಗತ ಕೋರಿದ ಜಾರ್ಜಿಯಾ ಮೆಲೋನಿ..!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಮಹಾಘಾತಕ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ..!

ಪ್ರಧಾನಿ ಮೋದಿಯನ್ನು 'ಹಾವಾಡಿಗ'ನಂತೆ ಬಿಂಬಿಸಿ ವಿಕೃತಿ: ಭಾರತವನ್ನು ಹೀಯಾಳಿಸಿದ ನಾರ್ವೆ ಪತ್ರಿಕೆ; ನೆಟ್ಟಿಗರು ತೀವ್ರ ಕಿಡಿ

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

SCROLL FOR NEXT