ಸಿಎಂ ಬೊಮ್ಮಾಯಿ 
ರಾಜ್ಯ

ಪಂಚಮಸಾಲಿ ಸಮುದಾಯಕ್ಕೆ ಸಾಮಾಜಿಕ ಬದ್ಧತೆಯ ನ್ಯಾಯ: ಸಿಎಂ ಬೊಮ್ಮಾಯಿ

ಪಂಚಮಸಾಲಿ ಸಮುದಾಯಕ್ಕೆ ಸಾಮಾಜಿಕ ಬದ್ಧತೆಯ ನ್ಯಾಯವನ್ನು ಒದಗಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. 

ದಾವಣಗೆರೆ: ಪಂಚಮಸಾಲಿ ಸಮುದಾಯಕ್ಕೆ ಸಾಮಾಜಿಕ ಬದ್ಧತೆಯ ನ್ಯಾಯವನ್ನು ಒದಗಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಿಹರ ಇವರ ವತಿಯಿಂದ ಆಯೋಜಿಸಿದ್ದ ಹರಜಾತ್ರಾ 2023 ಹಾಗೂ ರೈತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಸಮುದಾಯದಲ್ಲಿ ಹೆಚ್ಚಿರುವ ರೈತಾಪಿ ವರ್ಗಕ್ಕೆ ಶಕ್ತಿಯನ್ನು ತುಂಬಬೇಕು. ಶಕ್ತಿ ತುಂಬಲು ಸಾಮಾಜಿಕ ನ್ಯಾಯ ನೀಡಬೇಕು. ಅದಕ್ಕೆ ಅವರ ಪಾಲನ್ನು ಸರಿಯಾಗಿ ಕೊಡಬೇಕಾಗುತ್ತದೆ. ನಾವು ಈ ವಿಷಯದಲ್ಲಿ ಟೀಕೆಟಿಪ್ಪಣಿಗಳಿಗೆ ಗಮನ ನೀಡದೆ ಸಾಮಾಜಿಕ ಬದ್ಧತೆಯಿಂದ ನಿಮ್ಮ ಪಾಲನ್ನು ನ್ಯಾಯಸಮ್ಮತವಾಗಿ ನೀಡುತ್ತೇವೆ. ಆದರೆ ಇತರರಿಗೆ ಎಲ್ಲಿಯೂ ಅನ್ಯಾಯವಾಗದಂತೆ ಮಾಡಬೇಕು. ಶಾಶ್ವತವಾಗಿ ನಿಮಗೆ ನ್ಯಾಯ ನೀಡುವ ಕೆಲಸ ಮಾಡುತ್ತೇವೆ. ನ್ಯಾಯಾಲಯದಲ್ಲಿ ವಾದವನ್ನು ಪ್ರಬಲವಾಗಿ ಮಂಡಿಸಿ ನಮ್ಮ ತೀರ್ಮಾನವನ್ನು ನ್ಯಾಯವಾಗಿ ಸಮರ್ಪಿಸಿ ಮುಂದಿನ ಹೆಜ್ಜೆಯನ್ನು ಇಡುತ್ತೇವೆ. ಅಂತಿಮ ವರದಿ ಬಂದ ಕೂಡಲೇ ಕ್ರಮ ತೆಗೆದುಕೊಂಡು ನಿಮ್ಮ ನಿರೀಕ್ಷೆಗೆ ನ್ಯಾಯ ನೀಡಲಾಗುವುದು. ನಿಮ್ಮ ವಿಶ್ವಾಸಕ್ಕೆ ಕೂದಲೆಳೆಯಷ್ಟೂ ಧಕ್ಕೆ ಬರದಂತೆ ನೋಡಿಕೊಳ್ಳಲಾಗುವುದು ಎಂದರು.

ಟೀಕೆಟಿಪ್ಪಣಿಗೆ ಗಮನ ನೀಡೋಲ್ಲ

ಕೆಲವರು ಅವಸರದಲ್ಲಿ ನನ್ನ ಬಗ್ಗೆ ಮಾತನಾಡುತ್ತಾರೆ. ಸ್ವಲ್ಪ ದಿನಗಳಲ್ಲಿ ಯಾರು ಸರಿ ಯಾರು ತಪ್ಪು ಮಾಡಿದ್ದಾರೆ ಎಂದು ತಿಳಿಯುತ್ತದೆ. ವೈಯಕ್ತಿಕವಾಗಿ ಅವರು ಮಾತನಾಡಲಿ. ನಾನು ಅದನ್ನು ಮಾಡುವುದಿಲ್ಲ. ನಮ್ಮ ಮುಂದೆ  ಕೇವಲ ಸಮಾಜವಿರುವುದು. ಅವರಿಗೆ ನ್ಯಾಯ ನೀಡಬೇಕು. ದುಡಿಯುವವರಿಗೆ ನ್ಯಾಯ ನೀಡಲು ನಾವಿದ್ದೇವೆ. ನಿಮ್ಮ ಇಚ್ಛೆಯನ್ನು ಈಡೇರಿಸಲಾಗುವುದು. 

ಮಠದ ಏಳಿಗೆಗೆ ಶ್ರಮಿಸಿರುವ ಗುರುಪೀಠ ಸರ್ಕಾರ ಮಾಡುವ ಕೆಲಸವನ್ನು ಮಠಗಳು ಮಾಡಿವೆ. ಅದಕ್ಕಾಗಿಯೇ ನಾವು ಸಹಾಯ ಮಾಡಿದ್ದೇವೆ. ಎಲ್ಲಾ ಮಠಗಳನ್ನು ಸರಿಸಮಾನವಾಗಿ ಕಂಡು ಅಭಿವೃದ್ಧಿ ಮಾಡುತ್ತಿದ್ದೇವೆ. ಯಾರು ಕೂಡ ಅನ್ಯಥಾ ಮಾತನಾಡಬಾರದು. ನಮ್ಮ ಸಮಾಜ ಅಭಿವೃದ್ಧಿಯಾದರೆ ಸಾವಿರಾರು ಜನ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಕಿತ್ತೂರು ಪ್ರಾಧಿಕಾರವನ್ನು ಸ್ಥಾಪಿಸಿ 50 ಕೋಟಿ ರೂ.ಗಳನ್ನು ನೀಡಲಾಗಿದೆ. ಸಂಗೊಳ್ಳಿ ರಾಯಣ್ಣ , ವಾಲ್ಮೀಕಿ ಪೀಠ ಎಲ್ಲವನ್ನೂ ಸರಿ ಸಮಾನವಾಗಿ ಕಂಡಿದ್ದೇವೆ ಎಂದರು.

ಕಾನೂನಿನ ಚೌಕಟ್ಟಿನಲ್ಲಿ ನಿರ್ಣಯ

ಕೆಲವರಿಗೆ ರೈತರಿಗೆ ಸಹಾಯ ಮಾಡಿದರೆ ಲಾಭವಿಲ್ಲ ಎಂಬ  ಮನೋಭಾವವಿದೆ. ಸಾಮಾಜಿಕ ನ್ಯಾಯ ನೀಡುವುದು ನಮ್ಮ ಇಚ್ಛೆ. ಸಂವಿಧಾನಬದ್ದ , ಕಾನೂನಿನ ಚೌಕಟ್ಟಿನಲ್ಲಿ ನಿರ್ಣಯ ಮಾಡಬೇಕು, ಶಾಶ್ವತ ನಿರ್ಣಯ ಗಳಾಗಬೇಕು. ಇದು ರಾಜಕಾರಣವಲ್ಲ. ಸಮಾಜಕ್ಕೆ ನೀಡುವ ಉತ್ತರದಾಯಿತ್ವ. ಮೂಲದ ಹೆಜ್ಜೆಯನ್ನು ಸರಿಯಾದ ದಿಕ್ಕಿನತ್ತ ಇಟ್ಟಿದ್ದೇವೆ. ಪ್ರವರ್ಗ 2 ಆಗಲು ಇಟ್ಟಿದ್ದೇವೆ. 2ನೇ ಯೋಜನೆಯನ್ನು ಇಡಲು ಸಿದ್ಧತೆಗಳನ್ನು ಮಾಡಲಾಗಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಧ್ಯಂತರ ವರದಿಯನ್ನು ಅನುಷ್ಠಾನ ಮಾಡಲಾಗಿದೆ. ಸದಾಶಿವ ಆಯೋಗ ನೀಡಿರುವ ವರದಿಯನ್ನು ಯಾವುದೇ ಸರ್ಕಾರ ತಿರುಗಿ ನೋಡಿಲ್ಲ. ಸಾಮಾಜಿಕ ಸಮೀಕ್ಷೆ ಮಾಡಿರುವ ಕಾಂತರಾಜ್ ವರದಿ ಬಂದು 6 ವರ್ಷವಾದರೂ ಯಾರೂ ತಿರುಗಿ ನೋಡಿಲ್ಲ. ಜೈಪ್ರಕಾಶ್ ಹೆಗಡೆಯವರ ನೇತೃತ್ವದಲ್ಲಿ ನೇಮಕವಾಗಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರದಿ ಸಲ್ಲಿದ ಒಂದು ವಾರದೊಳಗೆ ಸಂಪುಟದಲ್ಲಿ ನಿರ್ಣಯ ಮಾಡಲಾಗಿದೆ. ಇದು ನಮ್ಮ ಬದ್ಧತೆ. ಇನ್ನೊಬ್ಬರಿಗೆ ಅನ್ಯಾಯವಾಗದೆ  ಶಾಶ್ವತವಾಗಿ ನ್ಯಾಯ ಸಿಗುವ ರೀತಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT