ರಾಜ್ಯ

ಚಾಮರಾಜನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು, ರೈತನ ವಿರುದ್ಧ ಪ್ರಕರಣ ದಾಖಲು

Ramyashree GN

ಚಾಮರಾಜನಗರ: ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ಶನಿವಾರ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬಂಡೀಪುರ ಸಮೀಪದ ಹೆಡಿಯಾಲ ಅರಣ್ಯ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರೈತನನ್ನು ಗೋಪಾಲ್ ಎಂದು ಗುರುತಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ದೊಡ್ಡಬರಗಿ ಗ್ರಾಮದ ರೈತ ಗೋಪಾಲ್ ತಮ್ಮ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದಾರೆ ಮತ್ತು ಬೇಲಿ ದಾಟಲು ಪ್ರಯತ್ನಿಸಿದ ಆನೆ ವಿದ್ಯುತ್ ಆಘಾತದಿಂದ ಸಾವಿಗೀಡಾಗಿದೆ ಎಂದಿದ್ದಾರೆ.

ಅಧಿಕಾರಿಗಳು ರೈತನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಹಿಂದೆ 2018ರಲ್ಲಿ ಇದೇ ಜಮೀನಿನಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಆನೆಯೊಂದು ವಿದ್ಯುತ್‌ ಸ್ಪರ್ಶದಿಂದ ಕೃಷಿ ಭೂಮಿಗೆ ನುಗ್ಗಿ ಮೃತಪಟ್ಟಿತ್ತು ಎಂದು ಅರಣ್ಯಾಧಿಕಾರಿಗಳು ವಿವರಿಸಿದ್ದಾರೆ.

ಸದ್ಯ 25 ವರ್ಷದ ಹೆಣ್ಣು ಆನೆ ಸಾವನ್ನಪ್ಪಿದ್ದು, ತನಿಖೆ ನಡೆಯುತ್ತಿದೆ.

ಈ ಪ್ರದೇಶದಲ್ಲಿ ಮಾನವ- ಪ್ರಾಣಿ ಸಂಘರ್ಷ ಉಲ್ಬಣಗೊಂಡಿದ್ದು, ಕಾಡುಪ್ರಾಣಿಗಳು ಹಾಗೂ ಮನುಷ್ಯರ ಸಾವು ಸಂಭವಿಸಿದೆ.

ರಾಜ್ಯದ ಗ್ರಾಮಗಳಿಂದ ಆನೆಗಳನ್ನು ಓಡಿಸಲು ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

SCROLL FOR NEXT