ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಮನಗರ: ಊಟದ ವಿಚಾರಕ್ಕಾಗಿ ಜಗಳ; ತಾಯಿ ಮತ್ತು ಮಗ ಆತ್ಮಹತ್ಯೆ

ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಬಳಿಕ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್​ನಲ್ಲಿ ನಡೆದಿದೆ.

ರಾಮನಗರದಲ್ಲಿ ತಾಯಿ-ಮಗ ಆತ್ಮಹತ್ಯೆ
Shilpa D
Updated On : 14 Jan 2023, 2:19 pm

ರಾಮನಗರ: ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಬಳಿಕ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್​ನಲ್ಲಿ ನಡೆದಿದೆ.

ಮೃತರನ್ನು ವಿಜಯಲಕ್ಷ್ಮಿ(50) ಮತ್ತು ಹರ್ಷ(25)ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ರಾತ್ರಿ ಊಟದ ವಿಚಾರವಾಗಿ ಮಗ ಹರ್ಷ ಜಗಳವಾಡಿದ್ದ. ಈ ಕಾರಣಕ್ಕೆ ಮನನೊಂದ ತಾಯಿ ನೀರಿನ ಸಂಪಿಗೆ  ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇದರಿಂದ ಮನನೊಂದ ಹರ್ಷ, ನಾನೇ ತಾಯಿ ಸಾವಿಗೆ ಕಾರಣನಾದೆ ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಐಜೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement