ಯೋಗಥಾನ್-2023 
ರಾಜ್ಯ

ಗಿನ್ನೀಸ್ ದಾಖಲೆ ಸೇರಿದ ಕರ್ನಾಟಕದ ಯೋಗಥಾನ್-2023; ರಾಜಸ್ಥಾನದ ದಾಖಲೆ ಸರಿಗಟ್ಟಿದ ರಾಜ್ಯ!

ರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಜ್ಯಾದ್ಯಂತ ನಡೆದ ಯೋಗಥಾನ್ ಗಿನ್ನೀಸ್ ದಾಖಲೆ ಸೇರುವಲ್ಲಿ ಯಶಸ್ವಿಯಾಗಿದೆ. 

ಬೆಂಗಳೂರು: ರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಜ್ಯಾದ್ಯಂತ ನಡೆದ ಯೋಗಥಾನ್ ಗಿನ್ನೀಸ್ ದಾಖಲೆ ಸೇರುವಲ್ಲಿ ಯಶಸ್ವಿಯಾಗಿದೆ. 

ಯೋಗಥಾನ್ 2023 ಕರ್ನಾಟಕದ ಹೆಸರಿನಲ್ಲಿ ಗಿನ್ನೀಸ್ ದಾಖಲೆ ಸೇರಿದ್ದು, ಧಾರವಾಡ ಸೇರಿದಂತೆ ರಾಜ್ಯಾದ್ಯಂತ  ಏಕಕಾಲಕ್ಕೆ 4,05,255ಕ್ಕೂ ಮಂದಿ ಸೇರಿ ಯೋಗ ಮಾಡಿರುವುದು ಈ ಹಿಂದೆ ರಾಜಸ್ಥಾನದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ. 

2018 ರಲ್ಲಿ ರಾಜಸ್ಥಾನದಲ್ಲಿ ಏಕಕಾಲಕ್ಕೆ 1.60 ಲಕ್ಷ ಜನರು ಯೋಗ ಮಾಡಿದ್ದು ದಾಖಲೆಯಾಗಿತ್ತು. ಇಂದು ಬೆಳಗ್ಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಯೋಗಥಾನ್ ಉದ್ಘಾಟಿಸಿದ್ದರು.

ಈ ಕಾರ್ಯಕ್ರಮ ಯಶಸ್ವಿಗೊಳಿಸಿದ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು, ಸ್ವಯಂ ಸೇವಕರು, ಸರ್ಕಾರಿ ನೌಕರರು, ಅಧಿಕಾರಿಗಳು, ಯೋಗಪಟುಗಳು ಸೇರಿದಂತೆ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT