ಚಾಮರಾಜಪೇಟೆಯ ಈದ್ಗಾ ಮೈದಾನ 
ರಾಜ್ಯ

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸುತ್ತೇವೆ: ಹಿಂದೂ ಕಾರ್ಯಕರ್ತರು

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಹಾಗೂ ಇತರೆ ಹಿಂದೂಪರ ಸಂಘಟನೆಗಳ ಸದಸ್ಯರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಹಾಗೂ ಇತರೆ ಹಿಂದೂಪರ ಸಂಘಟನೆಗಳ ಸದಸ್ಯರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.
ಸಂಸ್ಥೆಯು 2022ರ ಡಿಸೆಂಬರ್‌ನಲ್ಲಿ ಮೈದಾನದಲ್ಲಿ ಧ್ವಜಾರೋಹಣ ನಡೆಸಲು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತ್ತು.

ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಆಡಳಿತ ಅವಕಾಶ ನೀಡದಿದ್ದರೆ. ಆಡಳಿತದ ಆದೇಶವನ್ನು ಧಿಕ್ಕರಿಸಿ ಧ್ವಜಾರೋಹಣ ಮಾಡುವುದಾಗಿ ವೇದಿಕೆ ಸದಸ್ಯ ಶಶಾಂಕ ಜೆ.ಶ್ರೀಧರ ಎಚ್ಚರಿಸಿದರು. 2022ರ ಡಿ. 31ರಂದು ಪತ್ರ ನೀಡಿದ್ದೇವೆ ಮತ್ತು ಆ ಪತ್ರವನ್ನು ಸರ್ಕಾರಕ್ಕೆ ರವಾನಿಸಲಾಗಿದೆ ಎಂದು ಬೆಂಗಳೂರು ಡಿಸಿ ಕಚೇರಿ ತಿಳಿಸಿದೆ ಎಂದು ಹೇಳಿದರು.

ಅಲ್ಲದೆ, ಹಿಂದೂ ಜೈ ಭೀಮ್ ಸೇನೆಯ ಮುಖಂಡ ಚಂದ್ರಶೇಖರ ಕೋಟೆಶೇಕಿ ಮಾತನಾಡಿ, 2022ರ ಡಿ. 29 ರಂದು ಸಹ ಇದೇ ರೀತಿಯ ಮನವಿ ಸಲ್ಲಿಸಲಾಗಿದೆ. ಈ ನೆಲವು ಸರ್ಕಾರಕ್ಕೆ ಸೇರಿದ್ದು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜವನ್ನು ಹಾರಿಸಲು ಸಾರ್ವಜನಿಕರಿಗೆ ಅವಕಾಶ ಸಿಗದಿರುವಾಗ, ಕೇವಲ ಒಂದು ಸಮುದಾಯಕ್ಕೆ ಪ್ರಾರ್ಥನೆ ಸಲ್ಲಿಸಲು ಹೇಗೆ ಅವಕಾಶ ನೀಡಬಹುದು' ಎಂದು ಪ್ರಶ್ನಿಸಿದರು.

ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ತಮ್ಮ ಕಚೇರಿಗೆ ಕೆಲವು ಮನವಿಗಳು ಬಂದಿವೆ. ಇವುಗಳನ್ನು ಕಂದಾಯ ಇಲಾಖೆಗೆ ರವಾನಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆಎ ದಯಾನಂದ್ ತಿಳಿಸಿದ್ದಾರೆ.

ಆರ್‌ಟಿಐ ಕಾರ್ಯಕರ್ತ ಮತ್ತು ವಿಶ್ವ ಸನಾತನ ಪರಿಷತ್ತಿನ ಅಧ್ಯಕ್ಷ ಎಸ್ ಭಾಸ್ಕರನ್ ಮಾತನಾಡಿ,  2022ರ ಜೂನ್‌ನಿಂದ ಈ ಆಟದ ಮೈದಾನವು ವಿವಾದಕ್ಕೆ ಕಾರಣವಾಗಿದೆ. ಈ ಜಮೀನು ಪುರಸಭೆಗೆ ಸೇರಿದ್ದು ಮತ್ತು 2.5 ಎಕರೆ ಭೂಮಿಯ ಮೇಲೆ ಸರ್ಕಾರಕ್ಕೆ ಹಕ್ಕಿದೆ ಎಂದು ಹೇಳಿದರು.

ಪಶ್ಚಿಮ ವಿಭಾಗದ ಬಿಬಿಎಂಪಿ ಜಂಟಿ ಆಯುಕ್ತರು ನಡೆಸಿದ ವಿಚಾರಣೆ ನಂತರ ವಕ್ಫ್ ಮಂಡಳಿಯು ಅಗತ್ಯ ದಾಖಲೆಗಳನ್ನು ಒದಗಿಸಲು ವಿಫಲವಾದ ಕಾರಣ ಈ ಜಮೀನು ಕಂದಾಯ ಇಲಾಖೆಗೆ ಸೇರಿದೆ ಎಂದು ಹೇಳಲಾಗಿದೆ. 2022ರ ಆಗಸ್ಟ್ 15ರಂದು ಬೆಂಗಳೂರು ಉತ್ತರದ ಕಂದಾಯ ಇಲಾಖೆಯ ಸಹಾಯಕ ಆಯುಕ್ತ ಎಂ.ಜಿ.ಶಿವಣ್ಣ ಅವರು ತ್ರಿವರ್ಣ ಧ್ವಜವನ್ನು ಹಾರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT