ಶಿರಸಿಯಲ್ಲಿ ಭಾನುವಾರ ನಡೆದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. 
ರಾಜ್ಯ

ಗೋವಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದರ ಬಗ್ಗೆ ಕರ್ನಾಟಕಕ್ಕೇನೂ ಚಿಂತೆಯಿಲ್ಲ: ಸಿಎಂ ಬೊಮ್ಮಾಯಿ

ಮಹದಾಯಿ ವಿವಾದ ಸಂಬಂಧ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದರ ಬಗ್ಗೆ ಕರ್ನಾಟಕಕ್ಕೇನೂ ಚಿಂತೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ಶಿರಸಿ (ಉತ್ತರ ಕನ್ನಡ): ಮಹದಾಯಿ ವಿವಾದ ಸಂಬಂಧ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದರ ಬಗ್ಗೆ ಕರ್ನಾಟಕಕ್ಕೇನೂ ಚಿಂತೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೊಮ್ಮಾಯಿಯವರು ಭಾನುವಾರ ಶಿರಸಿಗೆ ಭೇಟಿ ನೀಡಿದ್ದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಿರಸಿಗೆ ಬೊಮ್ಮಾಯಿಯವರು ಭೇಟಿ ನೀಡಿದ್ದರು.

ರಾಜ್ಯ ಸರ್ಕಾರದ ಅವಧಿ ಪೂರ್ಣಗೊಳ್ಳಲು ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಗೆ ಅದರಲ್ಲೂ ವಿಶೇಷವಾಗಿ ಶಿರಸಿಗೆ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಬೃಹತ್ ಕೊಡುಗೆಯನ್ನು ಘೋಷಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿ ನೀರು ತಿರುವು ಯೋಜನೆಗೆ ಸಂಬಂಧಿಸಿದಂತೆ ಗೋವಾ ಸುಪ್ರೀಂ ಕೋರ್ಟ್‌ನ ಬಾಗಿಲು ತಟ್ಟಿದರೂ ನಮಗೇನೂ ಚಿಂತೆಯಿಲ್ಲ. “ಗೋವಾ ತನಗೆ ಬೇಕಾದ ಸ್ಥಳಕ್ಕೆ ಹೋಗಲಿ, ನಾವು ಚಿಂತಿಸಬೇಕಾಗಿಲ್ಲ. ಸುಪ್ರೀಂಕೋರ್ಟ್ ನಾಮನಿರ್ದೇಶನಗೊಂಡ ಪೀಠದ ನಿರ್ದೇಶನದಂತೆ ನಾವು ಕೆಲಸ ಮಾಡುತ್ತಿದ್ದೇವೆ. ಕಳಸಾ ಬಂಡೂರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಪೀಠದ ನಿರ್ದೇಶನದಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಗೋವಾ ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಹೋಗಿದ್ದು, ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಸುಪ್ರೀಂಕೋರ್ಟ್ ನೇಮಿಸಿದ ಪೀಠದ ನಿರ್ದೇಶನದಂತೆ ನಾವು ಅಧಿಸೂಚನೆಯನ್ನು ಹೊರಡಿಸಿದ್ದೇವೆಂದು ತಿಳಿಸಿದ್ದಾರೆ.

ಇದೇ ವೇಳೆ ಶಿರಸಿಗೆ ರೂ 250 ಕೋಟಿ ಪ್ಯಾಕೇಜ್ ಮತ್ತು ಪೂರ್ಣ ಪ್ರಮಾಣದ ಪರಿಸರ ವಿಶ್ವವಿದ್ಯಾಲಯದ ಸ್ಥಾಪನೆ ಸೇರಿದಂತೆ ಹಲವಾರು ಯೋಜನೆಗಳನ್ನು ಘೋಷಿಸಿದರು, ಇದಕ್ಕಾಗಿ ಈ ವರ್ಷ ಬಜೆಟ್ ಹಂಚಿಕೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

"ಈ ವಿಶ್ವವಿದ್ಯಾನಿಲಯವು ಈಗಾಗಲೇ ಅರಣ್ಯ ಮತ್ತು ತೋಟಗಾರಿಕೆ ಕಾಲೇಜುಗಳು ಅಸ್ತಿತ್ವದಲ್ಲಿರುವ ಶಿರಸಿಯಲ್ಲಿ ಮತ್ತಷ್ಟು ಅಭಿವೃದ್ಧಿಯನ್ನು ತರಲಿದೆ. ಕೃಷಿ, ಜೀವವೈವಿಧ್ಯ ಹಾಗೂ ವನ್ಯಜೀವಿ ಸಂರಕ್ಷಣೆ ಕುರಿತು ಅಧ್ಯಯನ ನಡೆಸಬೇಕಿದೆ. ಈ ವಿಶ್ವವಿದ್ಯಾನಿಲಯವು ಜನರ ಮೇಲೆ ಪರಿಸರ ಪರಿಣಾಮ ಮತ್ತು ವನ್ಯಜೀವಿಗಳ ರಕ್ಷಣೆಯ ಅಧ್ಯಯನವನ್ನು ಉತ್ತೇಜಿಸುತ್ತದೆ ಎಂದರು.

ಬಹು ನಿರೀಕ್ಷಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಮಾತನಾಡಿ, ಕುಮಟಾದಲ್ಲಿ ಆಸ್ಪತ್ರೆ ಬರಲಿದ್ದು, ಶೀಘ್ರವೇ ಶಂಕುಸ್ಥಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಪಕ್ಷದ ಹೈಕಮಾಂಡ್ ಸೂಚನೆಯಂತೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದೂ ಇದೇ ವೇಳೆ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT