ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು

ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಂಗಳವಾರ ಇಬ್ಬರು ಕಾಲೇಜ್ ವಿದ್ಯಾರ್ಥಿಗಳು ತೆರಳುತ್ತಿದ್ದ ದ್ವಿಚಕ್ರ ವಾಹನ, ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಂಗಳವಾರ ಇಬ್ಬರು ಕಾಲೇಜ್ ವಿದ್ಯಾರ್ಥಿಗಳು ತೆರಳುತ್ತಿದ್ದ ದ್ವಿಚಕ್ರ ವಾಹನ, ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ರಾತ್ರಿ 9 ಗಂಟೆಯ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ  ಅಪಘಾತ ನಡೆದಿದ್ದು, ಮೃತ ವಿದ್ಯಾರ್ಥಿಗಳನ್ನು ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಮತ್ತು ಸಾಲಿಗ್ರಾಮ ನಿವಾಸಿ ವಾಗೀಶ್ (19) ಎಂದು ಗುರುತಿಸಲಾಗಿದೆ. ಮೃತ ಯುವಕರಿಬ್ಬರೂ ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ.

ವರದಿಗಳ ಪ್ರಕಾರ, ಇಬ್ಬರು ವಿದ್ಯಾರ್ಥಿಗಳು ಬೈಕ್ ನಲ್ಲಿ ಕಾಲೇಜಿನಿಂದ ಮನೆಗೆ ಹೋಗುತ್ತಿದ್ದಾಗ ಓವರ್‌ಟೇಕ್ ಮಾಡುವ ಪ್ರಯತ್ನದಲ್ಲಿ ಬೈಕ್ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT