ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: BMTC ಗೆ ಮತ್ತೊಂದು ಬಲಿ, ಬಸ್ ಅಡಿ ಸಿಲುಕಿ​ ಬೈಕ್ ಸವಾರ ಸಾವು

ಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಮೀಪ ಸಂಭವಿಸಿದೆ.

ಬೆಂಗಳೂರು: ಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಮೀಪ ಸಂಭವಿಸಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸೋಮನಹಳ್ಳಿ ಬ್ರಿಡ್ಜ್​ ಬಳಿ ಈ ಘಟನೆ ನಡೆದಿದ್ದು, ಬ್ರಿಡ್ಜ್​ ಬಳಿ ಮುಂದೆ ತೆರಳುತ್ತಿದ್ದ, ಬೈಕ್​ಗೆ ಬಿಎಂಟಿಎಸ್​​ ಬಸ್​ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರನ್ನು ಪೊಲೀಸರು ಮತ್ತು ಸ್ಥಳಿಯರು ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್​ ಸವಾರ ಸಾವನ್ನಪ್ಪಿದ್ದಾನೆ. 

ಮೃತ ಬೈಕ್ ಚಾಲಕನನ್ನು ವಿಜಯನಗರ ಕುಲದೀಪ್ ಬಗರೇಚಾ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಬಸ್ ಚಾಲಕ ಆನಂದ್ ರಾವ್ ಹಾಗು ಬಸ್​ನ್ನು ವಶಕ್ಕೆ ಪಡೆದಿದ್ದಾರೆ.

ಈ ಹಿಂದೆ ಕೆಳಗೆ ಬಿಎಂಟಿಸಿ (BMTC) ಬಸ್​ ಕೆಳಗೆ ಸಿಲುಕಿ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಳು. ಬಳಿಕ ನವೆಂಬರ್​ 29 ರಂದು ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್​ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಗರದ ಮಾಗಡಿ ರಸ್ತೆ ಜಂಕ್ಷನ್ ಬಳಿ ನಡೆದಿತ್ತು. ಘಟನೆಯಲ್ಲಿ ಮಂಜುನಾಥ್(25 ವರ್ಷ), ಶಿವರಾಜ್(29 ವರ್ಷ) ಸಾವನ್ನಪ್ಪಿದ್ದರು. ಮೃತರು ಗೊಲ್ಲರಹಟ್ಟಿಯ ಇಂದಿರಾ ಕಾಲೋನಿ ನಿವಾಸಿಗಳು ಎಂದು ತಿಳಿಬಂದಿತ್ತು. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT