ಸ್ಯಾಂಟ್ರೋ ರವಿ 
ರಾಜ್ಯ

ಸ್ಯಾಂಟ್ರೋ ರವಿಗೆ ಮತ್ತೊಂದು ಸಂಕಷ್ಟ: ಹೊಸ ಪ್ರಕರಣ ದಾಖಲಿಸಿದ ಪತ್ನಿ

ವೇಶ್ಯಾವಾಟಿಕೆ ಕಿಂಗ್‌ಪಿನ್ ಸ್ಯಾಂಟ್ರೋ ರವಿ ಪ್ರಕರಣ  ಸಿಐಡಿಗೆ ವರ್ಗಾವಣೆಯಾಗಿದೆ. ಇದರ ನಡುವೆ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಹೊಸ ಕೇಸ್ ದಾಖಲಾಗಿದೆ.

ಮೈಸೂರು: ವೇಶ್ಯಾವಾಟಿಕೆ ಕಿಂಗ್‌ಪಿನ್ ಸ್ಯಾಂಟ್ರೋ ರವಿ ಪ್ರಕರಣ  ಸಿಐಡಿಗೆ ವರ್ಗಾವಣೆಯಾಗಿದೆ. ಇದರ ನಡುವೆ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಹೊಸ ಕೇಸ್ ದಾಖಲಾಗಿದೆ.

ಚೆಕ್ ಕಳ್ಳತನ ಸಂಬಂಧ ಮೈಸೂರಿನ ದೇವರಾಜ ಪೊಲೀಸ್ ಸ್ಟೇಷನ್​​ನಲ್ಲಿ ಸ್ಯಾಂಟ್ರೊ ರವಿ ವಿರುದ್ಧ ಅವರ ಎರಡನೇ ಪತ್ನಿ ಸೋಮವಾರ ದೂರು ನೀಡಿದ್ದಾರೆ. ಅವರು ಪೊಲೀಸರಿಗೆ ನೀಡಿರುವ ದೂರಿನ ವಿವರ ಇಲ್ಲಿದೆ.

"ಸೆಪ್ಟೆಂಬರ್ 22, 2022 ರಂದು ನಾನು ಮೈಸೂರಿನ ದೇವರಾಜ ಮಾರ್ಕೆಟ್​ಗೆ ಹೋಗಿದ್ದೆ. ನನ್ನ ಸ್ಕೂಟರ್ ಡಿಕ್ಕಿಯಲ್ಲಿ ಚೆಕ್ ಬುಕ್ ಇಟ್ಟಿದ್ದೆ. ಸ್ಯಾಂಟ್ರೋ ರವಿ ಮತ್ತು ಪ್ರಕಾಶ್ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಚೆಕ್ ಬುಕ್ ಕಳವು ಮಾಡಿದ್ದಾರೆ. ಬಳಿಕ ನನ್ನ ಚೆಕ್ ಬುಕ್ ದುರುಪಯೋಗ ಮಾಡಿಕೊಂಡಿದ್ದಾರೆ. ನಾನು ಸೈನ್ ಮಾಡಿರುವ ಎರಡು ಚೆಕ್​ ಅನ್ನು ಕೆನರಾ ಬ್ಯಾಂಕ್​​ಗೆ ನೀಡಿದ್ದಾರೆ.  ನನ್ನ ಪತಿಯೇ ಚೆಕ್ ಕದ್ದು ದುರ್ಬಳಕೆ ಮಾಡಿಕೊಂಡಿರೋದು ಗೊತ್ತಾಗಿದೆ. 10 ಲಕ್ಷ ರೂ. ಚೆಕ್ ಬೌನ್ಸ್ ಕೇಸ್ ಹಾಕಿದ್ದ ಪ್ರಕಾಶ್, 2022ರಲ್ಲಿ ಇದೇ ಚೆಕ್‌ಲೀಫ್ ಬಳಸಿ 5 ಲಕ್ಷ ರೂ. ಕೇಸ್ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ಇನ್ನೆರಡು ಚೆಕ್ ಹಾಗೆಯೇ ಇಟ್ಟುಕೊಂಡಿದ್ದಾರೆ‌. ಈ ಸಂಬಂಧ ದೇವರಾಜ ಪೊಲೀಸ್ ಸ್ಟೇಷನ್​​ನಲ್ಲಿ ಸೆಪ್ಟೆಂಬರ್ 24 ರಂದು ದೂರು ನೀಡಿದ್ದೆ" ಎಂದು ಪತಿ ವಿರುದ್ಧ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಂತ್ರಸ್ಥೆ ನೀಡಿದ ದೂರು ಆಧರಿಸಿ ಸ್ಯಾಂಟ್ರೋ ರವಿ ವಿರುದ್ಧ ಐಪಿಸಿ 465, 468, 506, 420 ಹಾಗೂ 34 ಸೆಕ್ಷನ್​ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ಸ್ಯಾಂಟ್ರೋ’ ರವಿ ಪ್ರಕರಣದ ಕುರಿತು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದ ನಂತರ, ನಾಲ್ವರು ಸದಸ್ಯರ ತಂಡ ಮೈಸೂರಿಗೆ ಆಗಮಿಸಿದ್ದು, ವಿಜಯನಗರ ಪೊಲೀಸರು ಸಂಬಂಧಪಟ್ಟ ಕಡತಗಳನ್ನು ಹಸ್ತಾಂತರಿಸಿದ್ದಾರೆ. ಅವರ ಕಸ್ಟಡಿಗೆ ಕೋರಿ ನ್ಯಾಯಾಲಯಕ್ಕೆ ಅರ್ಜಿಯನ್ನೂ ಸಲ್ಲಿಸಿದ್ದರು. ಮಂಗಳವಾರ ನ್ಯಾಯಾಲಯ ಅವರನ್ನು ಸಿಐಡಿ ವಶಕ್ಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT