mallesh 
ರಾಜ್ಯ

ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಹೃದಯಾಘಾತದಿಂದ ನಿಧನ

ಸಮಾಜವಾದಿ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕರಾಗಿದ್ದ ಮೈಸೂರಿನ ಪ.ಮಲ್ಲೇಶ್(85) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೈಸೂರು: ಸಮಾಜವಾದಿ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕರಾಗಿದ್ದ ಮೈಸೂರಿನ ಪ.ಮಲ್ಲೇಶ್(85) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ಮಧ್ಯಾಹ್ನ ಮೈಸೂರಿನ ತಮ್ಮ ನಿವಾಸದಲ್ಲಿ ಎದೆ ನೋವಿನಿಂದ ಕುಸಿದು ಬಿದ್ದ ಮಲ್ಲೇಶ್ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

85 ವರ್ಷದ ಪ.ಮಲ್ಲೇಶ್ ಅವರು ಮೂವರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ. ಎರಡು ವರ್ಷಗಳ ಹಿಂದೆ ಅವರ ಪತ್ನಿ ಸರ್ವಮಂಗಳ ಅವರು ಮೃತಪಟ್ಟಿದ್ದರು.

1989ರ ಲೋಕಸಭೆ ಚುನಾವಣೆಯಲ್ಲಿ ಜನತಾ ದಳದಿಂದ ಸ್ಪರ್ಧಿಸಿದ್ದ ಪ.ಮಲ್ಲೇಶ್ ಅವರು 1,31,905 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದಿದ್ದರು. ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ವಿರುದ್ಧ ಸೋಲು ಅನುಭವಿಸಿದ್ದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಪ್ತರಾಗಿದ್ದ ಪ.ಮಲ್ಲೇಶ್ ಪ್ರಗತಿಪರ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಕಳೆದ ವರ್ಷ ಬ್ರಾಹ್ಮಣರ ಮತ್ತು ಬ್ರಾಹ್ಮಣ್ಯದ ಬಗ್ಗೆ ಮಾತನಾಡಿ, ವಿವಾದಕ್ಕೆ ಸಿಲುಕಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್