ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ ಎನ್‌ಟಿಸಿಎ, ಪರಿಸರ ಸಚಿವಾಲಯ!

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(NTCA) ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹುಲಿಗಳ ಸಾವಿನ ಘಟನೆಗಳ ಕುರಿತು ಕಳವಳ ವ್ಯಕ್ತಪಡಿಸಿದ್ದು ರಾಜ್ಯ ಸರ್ಕಾರದಿಂದ ಕೈಗೊಂಡ ಕ್ರಮಗಳ ಕುರಿತು ವರದಿ ಕೇಳಿದೆ.

ಬೆಂಗಳೂರು: ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(NTCA) ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹುಲಿಗಳ ಸಾವಿನ ಘಟನೆಗಳ ಕುರಿತು ಕಳವಳ ವ್ಯಕ್ತಪಡಿಸಿದ್ದು ರಾಜ್ಯ ಸರ್ಕಾರದಿಂದ ಕೈಗೊಂಡ ಕ್ರಮಗಳ ಕುರಿತು ವರದಿ ಕೇಳಿದೆ. ಇದೇ ವೇಳೆ ಹುಲಿಗಳಲ್ಲದೆ ಚಿರತೆ, ಆನೆಗಳ ಸಂಘರ್ಷ ಪ್ರಕರಣಗಳು ಕುರಿತು ವರದಿ ನೀಡುವಂತೆ ಸೂಚಿಸಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇತ್ತೀಚೆಗೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಎನ್‌ಟಿಸಿಎ ಸಭೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳನ್ನು ಈ ಬಗ್ಗೆ ಪ್ರಶ್ನಿಸಲಾಯಿತು. ಮಾನವ-ಪ್ರಾಣಿ ಸಂಘರ್ಷಗಳನ್ನು ಕಡಿಮೆ ಮಾಡಲು ಸಲುವಾಗಿ ವಯನಾಡಿನಲ್ಲಿ ಹುಲಿಗಳನ್ನು ಕೊಲ್ಲಲು ಕೇರಳ ಸರ್ಕಾರವು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಈ ವಿಷಯವು ಮಹತ್ವ ಪಡೆದುಕೊಂಡಿದೆ.

ಹುಲಿಗಳು ಮತ್ತು ಇತರ ವನ್ಯಜೀವಿಗಳ ಸಾವುಗಳನ್ನು ನಿರ್ಣಯಿಸಲು ಸಮಿತಿಯನ್ನು ಸಹ ರಚಿಸಲಾಗುತ್ತಿದೆ ಎಂದು ಎನ್‌ಟಿಸಿಎಯ ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. 'ಘರ್ಷಣೆಗಳನ್ನು ನಿಯಂತ್ರಿಸಲು ಸರ್ಕಾರವು ಏನು ಮಾಡುತ್ತಿದೆ. ಸಂಘರ್ಷಗಳ ಸಂಖ್ಯೆಗಳು, ಸಾವುಗಳು ಮತ್ತು ಕಾರಣಗಳ ದತ್ತಾಂಶವನ್ನು ತಿಳಿಯಲು ವರದಿಯನ್ನು ಕೇಳಲಾಗಿದೆ. ಇನ್ನು ಪ್ರಾಣಿಯನ್ನು ಸೆರೆಹಿಡಿದು, ಪ್ರಾಣಿ ಸಂಗ್ರಹಾಲಯಗಳು ಅಥವಾ ರಕ್ಷಣಾ ಕೇಂದ್ರಗಳಿಗೆ ಕಳುಹಿಸುವ ಬಗ್ಗೆ ಗಮನಿಸಲಾಗಿದೆ. ಅದಕ್ಕಾಗಿ ಕಿರು ಅರಣ್ಯಗಳನ್ನು ನಿರ್ಮಿಸಲಾಗುತ್ತದೆ ಎಂದು ಅಧಿಕಾರಿ ಹೇಳಿದರು.

ಮಾನುಷ್ಯ-ಪ್ರಾಣಿ ಸಂಘರ್ಷಗಳಿಗೆ ಹೆಚ್ಚಿನ ಸಂದರ್ಭಗಳಲ್ಲಿ, ಅರಣ್ಯ ಒತ್ತುವರಿ. ಬಫರ್ ವಲಯಗಳ ಅನುಪಸ್ಥಿತಿ, ಭೂ ವಿಚಲನ, ಜನರಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಪ್ರಾಣಿಗಳ ಜನಸಂಖ್ಯೆಯ ಹೆಚ್ಚಳವು ಕಾರಣಗಳು ಎಂದು ನಿಕಟ ಮೌಲ್ಯಮಾಪನವು ತೋರಿಸಿದೆ ಎಂದು ಅಧಿಕಾರಿ ಹೇಳಿದರು. ಆದ್ದರಿಂದ ಪ್ರತಿಯೊಂದರಲ್ಲೂ ನಿಕಟ ಮೌಲ್ಯಮಾಪನ ಅಗತ್ಯವಿದೆ. ಸರ್ಕಾರ ಇದುವರೆಗೆ ಯಾವ ಜಾಗೃತಿ, ಶಿಕ್ಷಣ ಮತ್ತು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಇದು ಏಕೆ ವಿಫಲವಾಗಿದೆ ಎಂಬುದನ್ನು ತಿಳಿದುಕೊಳ್ಳುವ ಅವಶ್ಯಕತೆಯಿದೆ ಎಂದರು.

ಚಿರತೆ, ಹುಲಿ, ಆನೆಗಳ ಸಾವು ಹೆಚ್ಚಿದ್ದರೂ ಜನಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಇದು ಕಡಿಮೆ ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ. ಆದರೆ ಇದು ಸಹ ಆತಂಕಕಾರಿ ಸಂಗತಿ ಎಂದು ಅಧಿಕಾರಿಗಳು ಕೂಡ ದನಿಗೂಡಿಸಿದರು. ಇನ್ನು ವಯನಾಡ್ ಯೋಜನೆಯನ್ನು ಕರ್ನಾಟಕದಲ್ಲಿಯೂ ಯೋಚಿಸಬಾರದು ಏಕೆಂದರೆ ಇದು ವನ್ಯಜೀವಿಗಳ ಸಂಖ್ಯೆಯಲ್ಲಿ ತೀವ್ರ ಕುಸಿತಕ್ಕೆ ಕಾರಣವಾಗುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT