ಎನ್ಐಎ 
ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ NIA

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ PFI ಕಾರ್ಯಕರ್ತರ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ.

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ PFI ಕಾರ್ಯಕರ್ತರ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ಆರೋಪಿಗಳ ಪತ್ತೆಗೆ ಲುಕ್‌ ಔಟ್‌ ನೋಟಿಸ್‌ ಕೂಡ ಜಾರಿ ಮಾಡಿದ್ದು, ಇದೀಗ ಆರು ಆರೋಪಿಗಳ ಪತ್ತೆಗೆ ಒಟ್ಟು 19 ಲಕ್ಷ ರೂಪಾಯಿ ಇನಾಮು ಘೋಷಣೆ ಮಾಡಿದೆ.

ಏತನ್ಮಧ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ಪತ್ತೆಗೆ ತಲಾ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಎಂಬವರ ಮಗ ಮೊಹಮ್ಮದ್ ಷರೀಫ್(53)- 5 ಲಕ್ಷ ಹಾಗೂ ನೆಕ್ಕಿಲಾಡಿಯ ಅಗ್ನಾಡಿ ಹೌಸ್ ನ ಅಬೂಬಕರ್ ಮಗ ಮಸೂದ್ ಕೆ.ಎ (40)-5 ಲಕ್ಷ ಒಟ್ಟು 10 ಲಕ್ಷ ಬಹುಮಾನವನ್ನು ಎನ್‍ಐಎ ಘೋಷಿಸಿದೆ. ಆರೋಪಿಗಳ ಸುಳಿವು ಪತ್ತೆಯಾದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್‍ಐಎ ಎಸ್‍ಪಿಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

ಏನಿದು ಘಟನೆ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26ರ ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೂ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'

ಸ್ಪೀಕರ್ ಕೊಠಡಿಯಲ್ಲಿ ಕಾಂಗ್ರೆಸ್ ಸಂಸದರಿಂದ ಓಂ ಬಿರ್ಲಾ ಗೆ ನಿಂದನೆ, ಪ್ರಿಯಾಂಕಾ ಸಂಸದರನ್ನು ತಡೆಯಲಿಲ್ಲ: ರಿಜಿಜು

Thai school shooting: ಶಾಲೆ ಮೇಲೆ ಗುಂಡಿನ ಮಳೆ, 22 ಮಕ್ಕಳು ಸೇರಿ ಕನಿಷ್ಟ 34 ಸಾವು, ದಾಳಿಕೋರ ಪೊಲೀಸ್ ವಶಕ್ಕೆ!

ನರವಾಣೆ ಪುಸ್ತಕ ವಿವಾದ: 'ನಂಬರ್ ಒನ್' ಶಂಕಿತ, ಪೆಂಗ್ವಿನ್ ಪಬ್ಲಿಕೇಷನ್ಸ್‌ಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿ!

SCROLL FOR NEXT