ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ಭಾನುವಾರ ಟ್ರಾಫಿಕ್ ಜಾಮ್ | ಶಶಿಧರ್ ಬೈರಪ್ಪ 
ರಾಜ್ಯ

ಹಾರ್ನ್ ಮಾಡಿದರೂ ಜಗ್ಗುತ್ತಿಲ್ಲ: ಸಂಚಾರಕ್ಕೆ ಅಡ್ಡಿಪಡಿಸಿ ಬೆಂಗಳೂರಿನ ಟೆಕ್ಕಿಗಳನ್ನು ಕೆರಳಿಸುತ್ತಿರುವ ಎಮ್ಮೆಗಳು!

ನಗರದ ಕೆಲವೆಡೆ ಎಮ್ಮೆಗಳು ರಸ್ತೆಗೆ ಅಡ್ಡಿಪಡಿಸಿದ ಪರಿಣಾಮ ನಗರದ ಟೆಕ್ಕಿಗಳು ನಗರ ಸಂಚಾರ ಪೊಲೀಸರಿಗೆ ದೂರು ನೀಡಿದ್ದಾರೆ. ಹಲವು ಬಾರಿ ಎಮ್ಮೆಗಳ ಹಿಂಡು ರಸ್ತೆಗೆ ಬಂದು ಸಂಚಾರಕ್ಕೆ ಅಡ್ಡಿಪಡಿಸುವುದರಿಂದ ಗಂಟೆಗಟ್ಟಲೆ ವಾಹನ ಸಂಚಾರ ಸ್ಥಗಿತಗೊಳ್ಳುತ್ತಿದೆ ಎಂದು ದೂರಿದರು.

ಬೆಂಗಳೂರು: ನಗರದ ಕೆಲವೆಡೆ ಎಮ್ಮೆಗಳು ರಸ್ತೆಗೆ ಅಡ್ಡಿಪಡಿಸಿದ ಪರಿಣಾಮ ನಗರದ ಟೆಕ್ಕಿಗಳು ನಗರ ಸಂಚಾರ ಪೊಲೀಸರಿಗೆ ದೂರು ನೀಡಿದ್ದಾರೆ. ಹಲವು ಬಾರಿ ಎಮ್ಮೆಗಳ ಹಿಂಡು ರಸ್ತೆಗೆ ಬಂದು ಸಂಚಾರಕ್ಕೆ ಅಡ್ಡಿಪಡಿಸುವುದರಿಂದ ಗಂಟೆಗಟ್ಟಲೆ ವಾಹನ ಸಂಚಾರ ಸ್ಥಗಿತಗೊಳ್ಳುತ್ತಿದೆ ಎಂದು ದೂರಿದರು.

ಇತ್ತೀಚೆಗೆ ನಗರದ ಕಸವನಹಳ್ಳಿಯ ಐಟಿ ಹಬ್‌ನಲ್ಲಿ ಎಮ್ಮೆಗಳು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಟ್ರಾಫಿಕ್‌ನಿಂದಾಗಿ ನಿರ್ದಿಷ್ಟ ಪ್ರದೇಶದಲ್ಲಿ ಪ್ರಯಾಣದ ಸಮಯವು ಸಾಮಾನ್ಯ 20 ನಿಮಿಷಗಳ ಬದಲಿಗೆ 40 ರಿಂದ 50 ನಿಮಿಷಗಳನ್ನು ತೆಗೆದುಕೊಳ್ಳುವುದರಿಂದ ಇದು ಪ್ರತಿದಿನ ತಲೆನೋವಾಗುತ್ತಿದೆ. ಇದರಿಂದ ಕೆಲಸಕ್ಕೆ ತಡವಾಗಿ ಹೋಗಬೇಕಾಗುತ್ತಿದೆ ಎಂದು ದಿನನಿತ್ಯ ಓಡಾಡುವ ಪ್ರಯಾಣಿಕರು ಹೇಳುತ್ತಾರೆ. 

ಇದರಿಂದ ರೊಚ್ಚಿಗೆದ್ದ ನಾಗರಿಕರು, ಮುಂಜಾನೆ ಅಥವಾ ಸಂಜೆ ವೇಳೆ ಎಮ್ಮೆಗಳು ರಸ್ತೆಯನ್ನು ಆಕ್ರಮಿಸುತ್ತಿರುವುದರಿಂದ ಸುದೀರ್ಘ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ದೂರಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶು ಸಂಗೋಪನಾ ಇಲಾಖೆ ಹಾಗೂ ಸಂಚಾರ ಪೊಲೀಸರು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಕಾಟನ್‌ಪೇಟೆ, ಚಾಮರಾಜಪೇಟೆ, ಕಲಾಸಿಪಾಳ್ಯ, ವಿವಿ ಪುರಂ ಸೇರಿದಂತೆ ನಗರದ ಕೇಂದ್ರ ಭಾಗಗಳಲ್ಲಿ ಈಗಾಗಲೇ ಎಮ್ಮೆಗಳಿಂದ ಹಾವಳಿ ಉಂಟಾಗಿದ್ದು, ಇದೀಗ ವೈಟ್‌ಫೀಲ್ಡ್, ಬೆಳ್ಳಂದೂರು, ಕಸವನಹಳ್ಳಿಯಂತಹ ಹಲವು ಐಟಿ ಕಂಪನಿಗಳಿರುವ ಪ್ರದೇಶಗಳಿಗೂ ವ್ಯಾಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ