ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಕಾರ್ಯದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್​ಮ್ಯಾನ್ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆದಿದೆ.

ಬೆಂಗಳೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಕಾರ್ಯದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್​ಮ್ಯಾನ್ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆದಿದೆ. 

32 ವರ್ಷದ ಗೌತಮ್ ಮೃತ ದುರ್ದೈವಿಯಾಗಿದ್ದಾರೆ. ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದಾಗ ಗೌತಮ್ ವಿದ್ಯುತ್ ಪ್ರವಹಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯರ ಸಹಾಯದಿಂದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

 ಗೌತಮ್ ಸಾವಿನ ವಿಷಯ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ತಮ್ಮ ಮಗನ ಸಾವಿಗೆ ಕೆಇಬಿಯೇ ನೇರ ಹೊಣೆ ಎಂದು ಮೃತನ ತಂದೆ ರಂಗಸ್ವಾಮಿ ದೂರಿದ್ದಾರೆ.

'ನನ್ನ ಮಗನ ಸಾವಿಗೆ ಕೆಇಬಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್​ಗಳೇ ಕಾರಣ. ಆತನನ್ನು ಕೊಲೆ ಮಾಡಲಾಗಿದೆ ಎಂದು ರಂಗಸ್ವಾಮಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಬಾಬರ್‌ನ ಗೌರವಿಸಿ ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

SCROLL FOR NEXT