ಸಂಗ್ರಹ ಚಿತ್ರ 
ರಾಜ್ಯ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ

ಕಳೆದ ವರ್ಷದ ಸ್ವಾತಂತ್ರ್ಯ ದಿನದಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಬೆಂಗಳೂರು ನಗರ ಜಿಲ್ಲಾಡಳಿತ ಮಂಡಳಿಯು ಇದೀಗ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸಿದ್ಥತೆಗಳ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕಳೆದ ವರ್ಷದ ಸ್ವಾತಂತ್ರ್ಯ ದಿನದಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಬೆಂಗಳೂರು ನಗರ ಜಿಲ್ಲಾಡಳಿತ ಮಂಡಳಿಯು ಇದೀಗ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸಿದ್ಥತೆಗಳ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಕಾರ್ಯಕ್ರಮದ ಸಿದ್ಧತೆಗಾಗಿ ಜಿಲ್ಲಾಡಳಿತ ಆಡಳಿತಯ ಅಧಿಕಾರಿಗಳು ಪೊಲೀಸರು ಮತ್ತು ಇತರ ಸ್ಥಳೀಯ ಸಂಸ್ಥೆಗಳೊಂದಿಗೆ ಸಭೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಧ್ವಜಾರೋಹಣ ಕಾರ್ಯಕ್ರಮದ ಜೊತೆಗೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಈದ್ಗಾ ಮೈದಾನದಲ್ಲಿ ನಡೆಯಲಿವೆ. ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೈದಾನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲು ಸಿದ್ಧತೆಗಳ ನಡೆಸಲಾಗಿದೆ. ಬೆಂಗಳೂರು ಉತ್ತರ ಕಂದಾಯ ಸಹಾಯಕ ಆಯುಕ್ತರಿಗೆ ಇಲ್ಲಿನ ಗಣರಾಜ್ಯೋತ್ಸವದ ಜವಾಬ್ದಾರಿ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಮೈದಾನದ ಭೂಮಿ ಮಾಲೀಕತ್ವದ ಕುರಿತು ಮುಸ್ಲಿಂ ಸೆಂಟ್ರಲ್ ಅಸೋಸಿಯೇಷನ್, ವಕ್ಫ್ ಬೋರ್ಡ್ ಪರವಾಗಿ ತೀವ್ರ ವಾಗ್ವಾದ ಎದುರಾಗಿದ್ದು, ಇದು ಸರ್ಕಾರಿ ಆಸ್ತಿ ಎಂದು ಕಂದಾಯ ಇಲಾಖೆ ಪ್ರತಿಪಾದಿಸುತ್ತಿದೆ.

ಸರ್ಕಾರದ ನಿಲುವನ್ನು ಬೆಂಬಲಿಸಿ ಹಿಂದೂ ಸಂಘಟನೆಗಳು ಕೂಡ ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜೋತ್ಸವ ಮತ್ತು ಗಣರಾಜ್ಯೋತ್ಸವ ಆಚರಣೆಗಳನ್ನು ಹೊರತುಪಡಿಸಿ ಇತರ ಧರ್ಮಗಳ ಹಬ್ಬಗಳನ್ನು ಆಯೋಜಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸುತ್ತಿವೆ.

ಹಿಂದೂ ಸಂಘಟನೆಗಳು ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದಯಾನಂದ ಅವರು, ಆಚರಣೆಯ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!