ಉರುಳಿ ಬಿದ್ದ ಬಸ್ 
ರಾಜ್ಯ

ಮಲೆಮಹದೇಶ್ವರ ಬೆಟ್ಟ ಹತ್ತುತ್ತಿದ್ದ ಗುಜರಾತ್‌ ಬಸ್‌ ಪಲ್ಟಿ: 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

ಮಹದೇಶ್ವರ ಬೆಟ್ಟದ ಪಾಲಾರ್ ಬಳಿ ಪ್ರವಾಸಿ ಬಸ್ ಉರುಳಿ  ಬಿದ್ದಿದ್ದು, 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ತಮಿಳುನಾಡು ಪ್ರವಾಸ ಮುಗಿಸಿ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಇದಾಗಿತ್ತು ಎನ್ನಲಾಗಿದೆ.

ಚಾಮರಾಜನಗರ: ಮಹದೇಶ್ವರ ಬೆಟ್ಟದ ಪಾಲಾರ್ ಬಳಿ ಪ್ರವಾಸಿ ಬಸ್ ಉರುಳಿ  ಬಿದ್ದಿದ್ದು, 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ತಮಿಳುನಾಡು ಪ್ರವಾಸ ಮುಗಿಸಿ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಇದಾಗಿತ್ತು ಎನ್ನಲಾಗಿದೆ.

ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರವಾಸಿಗರಿದ್ದರು ಎನ್ನಲಾಗಿದ್ದು, ಈ ಪೈಕಿ 15 ಮಂದಿಗೆ ಗಾಯಗಳಾಗಿವೆ. ಗುಜರಾತ್‌ ನೋಂದಣಿ ಹೊಂದಿದ್ದ ಬಸ್‌ ಇದಾಗಿದೆ. ಆದರೆ, ಪ್ರವಾಸಿಗರು ಗುಜರಾತ್‌ನವರಾಗಿದ್ದಾರೆ.

ಬುಧವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಪಾಲಾರ್ ರಸ್ತೆಯ ಎರಡನೇ ತಿರುವು ಬಳಿ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ  ಒಟ್ಟು 50 ಜನರಿದ್ದು, ಈ ಪೈಕಿ  15 ಜನರಿಗೆ ಗಾಯಗಳಾಗಿವೆ.  ಗಾಯಾಳುಗಳಿಗೆ ಮಹದೇಶ್ವರ ಬೆಟ್ಟ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT