ಸಿಎಂ ಬೊಮ್ಮಾಯಿ 
ರಾಜ್ಯ

ಕರಾವಳಿಗೆ ಬಜೆಟ್ ನಲ್ಲಿ ದೊಡ್ಡ ಯೋಜನೆಗಳು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕರಾವಳಿ ನಮ್ಮ ರಾಜ್ಯದ ಆರ್ಥಿಕ ವಲಯದಲ್ಲಿ ಪ್ರಮುಖವಾಗಿರುವಂಥ ಪ್ರದೇಶ. ಇಲ್ಲಿಯ ಚಟುವಟಿಕೆಗಳು, ಬಂದರುಗಳ ಅಭಿವೃದ್ಧಿ, ಮೂಲ ಉದ್ಯೋಗಕ್ಕೆ ಇಂಬು ಕೊಡುವ, ಪ್ರವಾಸೋದ್ಯಮವನ್ನು ವಿಸ್ತರಿಸುವ ದೊಡ್ಡ ಕಾರ್ಯಕ್ರಮಗಳು ಮನದಲ್ಲಿವೆ-ಸಿಎಂ

ಉಡುಪಿ: ಕರಾವಳಿ ನಮ್ಮ ರಾಜ್ಯದ ಆರ್ಥಿಕ ವಲಯದಲ್ಲಿ ಪ್ರಮುಖವಾಗಿರುವಂಥ ಪ್ರದೇಶ. ಇಲ್ಲಿಯ ಚಟುವಟಿಕೆಗಳು, ಬಂದರುಗಳ ಅಭಿವೃದ್ಧಿ, ಮೂಲ ಉದ್ಯೋಗಕ್ಕೆ ಇಂಬು ಕೊಡುವ, ಪ್ರವಾಸೋದ್ಯಮವನ್ನು ವಿಸ್ತರಿಸುವ ದೊಡ್ಡ ಕಾರ್ಯಕ್ರಮಗಳು ಮನದಲ್ಲಿವೆ. ಬಜೆಟ್ ಬರುವವವರೆಗೆ  ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಾರ್ಕಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪತ್ರಕರ್ತರಿಗೆ ಬೆಂಬಲ

ಉಡುಪಿ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘ ರಜತಮಹೋತ್ಸವ ಆಚರಣೆ ಮಾಡುತ್ತಿದೆ. ಉಡುಪಿ ಜಿಲ್ಲೆಯಾಗಿ 25 ವರ್ಷಗಳ ಸಂಭ್ರಮೋತ್ಸವ ಆಚರಣೆಯಾದಂತೆಯೇ ಉಡುಪಿ ಪತ್ರಕರ್ತರ ಸಂಘ ಅದೇ ವರ್ಷ ಸ್ಥಾಪನೆಯಾಗಿದ್ದು 25 ವರ್ಷಗಳು ತುಂಬಿವೆ.

ಒಂದು ಸಂಘಕ್ಕೆ 25 ವರ್ಷ ನಿರಂತರವಾಗಿ ಸಾರ್ವಜನಿಕ ವಲಯದದಲ್ಲಿ ತಮ್ಮ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕ, ನಿಷ್ಠೆಯಿಂದ ನಿಭಾಯಿಸಿ, ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿದ  ಪತ್ರಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು. ಇಡೀ ವರ್ಷ ಹಮ್ಮಿಕೊಂಡಿರುವ 25 ಕಾರ್ಯಕ್ರಮಗಳು ಯಶಸ್ವಿಯಾಗಲಿ. ಸರ್ಕಾರ ಕ್ಷೇಮನಿಧಿಯಿಂದ ಹಿಡಿದು ಇತರೆ ಎಲ್ಲಾ ಬೆಂಬಲವನ್ನು ನೀಡಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!