ಸಿಎಂ ಬೊಮ್ಮಾಯಿ 
ರಾಜ್ಯ

ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಸಿಎಂ ಬೊಮ್ಮಾಯಿ

ಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಭರವಸೆ ನೀಡಿದ್ದಾರೆ.

ಬೆಂಗಳೂರು: ಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಭರವಸೆ ನೀಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಆಯೋಜನೆ ಮಾಡಿರುವ "ವಿಜ್ಞಾನ ಮೇಳ 2023"ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕೇವಲ ಕಟ್ಟಡ ಕಟ್ಟಿದರೆ ಸಾಲದು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನೂ ಕೊಡಬೇಕು. ಯಾವ ಯಾವ ಶಾಲೆಯಲ್ಲಿ ಏನೇನು ಆಗಬೇಕಿದೆ? ಅಭಿವೃದ್ಧಿಗೆ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂದು ಪಟ್ಟಿ ನೀಡಿ, ಶಾಲೆಗಳ ಸಮಗ್ರ ಅಭಿವೃದ್ಧಿಗೆ ನಾನು ಅನುದಾನ ಕೊಡುತ್ತೇನೆಂದು ಹೇಳಿದರು.

ಶಾಲೆಗಳಿಗೆ ಕೊಡುವ ಅನುದಾನ ಜಾಸ್ತಿಯಾಗುತ್ತಿದೆ. ಆದರೆ, ಅಭಿವೃದ್ಧಿ ಮಾತ್ರ ಸರಿಯಾಗಿ ಆಗುತ್ತಿಲ್ಲ. ಮಕ್ಕಳಿಗೆ ಬೇಕಾಗುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಕೊಡಬೇಕು. ಮೊದಲು ಮಕ್ಕಳ ಭವಿಷ್ಯ, ಆ ನಂತರ ಕಾಂಟ್ಯಾಕ್ಟ್ರರ್ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ವಸತಿ ಶಾಲೆಗಳಲ್ಲಿ ಕೇಲವ ಕಟ್ಟಡ ಹೆಚ್ಚಾಗುತ್ತಿದೆ. ಕೇವಲ ಕಾಂಟ್ರ್ಯಾಕ್ಟರ್‌ ಆಧಾರಿತ ಕೆಲಸ ಮಾಡಿದರೆ ಪ್ರಯೋಜನ ಇಲ್ಲ. ಬಿಲ್ಡಿಂಗ್ ವೆಚ್ಚ 5-10 ಕೋಟಿ ರೂ. ಆದರೆ ಇದೀಗ 20-30 ಕೋಟಿ ರೂ ಆಗಿದೆ. ಕೇವಲ ಕಟ್ಟಡ ಕಟ್ಟುವುದು ಬಿಟ್ಟು ಶಿಕ್ಷಣದ ಗುಣಮಟ್ಟ ‌ಹೆಚ್ಚಿಸಿ" ಎಂದು ಅಧಿಕಾರಿಗಳಿಗೆ ಸಲಹೆ ನೀಡಿದ‌ರು.

ವಸತಿ ಶಾಲೆ ಇಲ್ಲಿವರೆಗೂ ಎಸ್​ಎಸ್​ಎಲ್​​ಸಿ ವರೆಗೆ ಮಾತ್ರ ಇತ್ತು‌. ಬರುವ ವರ್ಷ ಅಲ್ಲಿ ಪಿಯುಸಿಯನ್ನು ಕಡ್ಡಾಯ ಮಾಡಿ. ಎಲ್ಲಿ ವ್ಯವಸ್ಥೆ ಇದೆಯೋ ಅಲ್ಲಿ ಪಿಯುಸಿ ಮುಂದುವರಿಸಬೇಕು. ಈ ಶಾಲೆಗಳಲ್ಲಿ ಒಂದು ಸ್ಪರ್ಧಾತ್ಮಕ ಪರೀಕ್ಷೆ ಮಾಡಿ" ಎಂದು ಸೂಚನೆ ನೀಡಿದರು.

ತಂದೆ ತಾಯಂದಿರು ಸಾಕಷ್ಟು ನಿರೀಕ್ಷೆ ಇಟ್ಟು ಮಕ್ಕಳನ್ನು ವಸತಿ ಶಾಲೆಗೆ ಕಳುಹಿಸಿ ಕೊಡುತ್ತಾರೆ. ಮಕ್ಕಳ ಭವಿಷ್ಯ ರೂಪಿಸಿದರೆ ಸಮಾಜದಲ್ಲಿ ಬದಲಾವಣೆ ಆಗುತ್ತದೆ. ವಸತಿ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮಾಡಿ. ಮಕ್ಕಳು 60 ರಿಂದ 70 ಪರ್ಸೆಂಟ್ ಪಡೆದು ವಸತಿ ಶಾಲೆಗೆ ಬರುತ್ತಾರೆ. ವಸತಿ ಶಾಲೆಯಿಂದ ಹೊರಹೋಗುವಾಗ ಶೇ.90 ರಷ್ಟು ಫಲಿತಾಂಶ ಪಡೆದು ಹೋಗಬೇಕು" ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT