ಸಾಂದರ್ಭಿಕ ಚಿತ್ರ 
ರಾಜ್ಯ

ಏರೋ ಇಂಡಿಯಾ ಶೋ: ಯಲಹಂಕ ವಾಯುನೆಲೆಯ 10 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ರವರೆಗೂ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.

ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 13 ರಿಂದ 17ರವರೆಗೂ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.

ಈ ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯುನೆಲೆಯ 10 ಕಿ.ಮೀ ವ್ಯಾಪ್ತಿಯಲ್ಲಿ ಜನವರಿ 30 ರಿಂದ ಫೆಬ್ರವರಿ 20ರವೆರಗೂ ಎಲ್ಲಾ ಮಾಂಸದ ಅಂಗಡಿಗಳು, ಚಿಕನ್, ಮೀನು ಮಾರಾಟ ಕೇಂದ್ರಗಳನ್ನು ಬಂದ್ ಮಾಡುವಂತೆ ಬಿಬಿಎಂಪಿ ಆದೇಶ ಹೊರಡಿಸಿದೆ. 

ಈ ಅವಧಿಯಲ್ಲಿ  ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳಲ್ಲಿ ಮಾಂಸ ಆಹಾರ ಮಾರಾಟ ಮತ್ತು ಸೇವೆಯನ್ನು ನಿರ್ಬಂಧಿಸಲಾಗಿದೆ. 

ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ವಿಮಾನ ನಿಯಮ 1937 ನಿಯಮ 91ರಡಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತರು ಆದೇಶದಲ್ಲಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್; ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದನ ಶಿಫ್ಟ್!

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!