ಅಮಿತ್ ಶಾ ಸ್ವಾಗತಿಸಿದ ಸಿಎಂ ಬೊಮ್ಮಾಯಿ ಮತ್ತಿತರರು 
ರಾಜ್ಯ

ಹುಬ್ಬಳ್ಳಿಗೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ; ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದಲ್ಲು, ಉಕ್ಕು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ನಂತರ ವಿಮಾನ ನಿಲ್ದಾಣದಿಂದ ಡೆನಿಸನ್ಸ್ ಹೋಟೆಲ್ ಗೆ ಅಮಿತ್ ಶಾ ತೆರಳಿದರು. ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿರುವ ಅಮಿತ್ ಶಾ, ಶನಿವಾರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಹುಬ್ಬಳ್ಳಿಗೆ ಆಗಮಿಸಿರುವ ಅಮಿತ್ ಶಾ, ಶನಿವಾರ ರೋಡ್ ಶೋ ನಡೆಸಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಿ.ವಿ.ಭೂಮರಡ್ಡಿ ಕಾಲೇಜಿನ 75ನೇ ವರ್ಷದ (ಪ್ಲಾಟಿನಂ ಮಹೋತ್ಸವ) ಸಮಾರಂಭದಲ್ಲಿ ಭಾಗವಹಿಸಲಿರುವ ಅಮಿತ್ ಶಾ, ಧಾರವಾಡದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಶಾಖೆಯ ಭೂಮಿ ಪೂಜೆಯನ್ನು ಅವರು ನೆರವೇರಿಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT