ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ಕೆ.ಎಲ್.ಇ ಸಂಸ್ಥೆಯ ಬಿ.ವಿ ಭೂಮರೆಡ್ಡಿ ತಾಂತ್ರಿಕ ವಿಶ್ವವಿದ್ಯಾಲಯ ಏರ್ಪಡಿಸಿರುವ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿದರು. 
ರಾಜ್ಯ

ತಂತ್ರಜ್ಞಾನದಲ್ಲಿ ಭಾರತ ನಂಬರ್ 1 ಆಗಬೇಕು, ಅದನ್ನು ಮಾಡುವುದು ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ: ಗೃಹ ಸಚಿವ ಅಮಿತ್ ಶಾ

ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. 

ಹುಬ್ಬಳ್ಳಿ: ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. 

ಇಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇಶದಲ್ಲಿ 2014ರಲ್ಲಿ ಮಹತ್ವದ ಪರಿವರ್ತನೆಯಾಯಿತು. ಕೇವಲ 8 ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿಯಾಗಿದೆ ಎಂದು ನುಡಿದರು. 

ವಿಶ್ವದೆದುರು ಭಾರತವನ್ನ ನಾಯಕ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಇಡೀ ವಿಶ್ವಕ್ಕೆ ಭಾರತದ ಶಕ್ತಿ ತೋರಿಸಬೇಕಿದೆ. ಮಹಾನ್ ಭಾರತದ ಕನಸನ್ನ ಯುವಜನತೆ ನನಸು ಮಾಡಬೇಕು. ಟೆಕ್ನಾಲಜಿಯಲ್ಲಿ ಭಾರತ ನಂ 1 ಆಗಬೇಕು. ಅದನ್ನು ಮಾಡುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಸ್ವಾತಂತ್ರ ಹೋರಾಟಗಾರರ ಕನಸು ನನಸು ಮಾಡಬೇಕಿದೆ ಎಂದರು. 

ನೀವು ದೇಶಕ್ಕಾಗಿ ನಿಮ್ಮ ಜೀವನವನ್ನು ತ್ಯಾಗ ಮಾಡಲು ಸಾಧ್ಯವಾಗದಿದ್ದರೆ ನಿಮ್ಮ ದೇಶಕ್ಕಾಗಿ ಜೀವನ ನಡೆಸಿ ಜಗತ್ತಿನಲ್ಲಿ ನಂಬರ್ 1 ಸ್ಥಾನಕ್ಕೆ ತನ್ನಿ, ಪ್ರಧಾನಿ ಮೋದಿಯವರು ಯುವಜನತೆಯ ಸಾಧನೆಗೆ ನಿಮಗೆ ಬೇಕಾದ ಅನೇಕ ಅವಕಾಶಗಳನ್ನು ಒದಗಿಸಿದ್ದಾರೆ.  ಎಂದರು. 

ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ಮುರುಗೇಶ್ ನಿರಾಣಿ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಕೆ ಎಲ್ ಇ ಸಂಸ್ಥೆಯ ಅಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ಹಾಗೂ ಕೆಎಲ್ಇ ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಅಶೋಕ್ ಶೆಟ್ಟರ್ ಉಪಸ್ಥಿತರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel