ಸಂಗ್ರಹ ಚಿತ್ರ 
ರಾಜ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 97.5ರಷ್ಟು ಏರಿಕೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಹಿಂದಿನ ಹಣಕಾಸು ವರ್ಷದ ಅವಧಿಗೆ ಹೋಲಿಸಿದರೆ ಏಪ್ರಿಲ್‌ನಿಂದ ಡಿಸೆಂಬರ್ 2022 ರವರೆಗೆ ಪ್ರಯಾಣಿಕರ ದಟ್ಟಣೆಯಲ್ಲಿ ಶೇಕಡಾ 97.5 ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಿಳಿಸಿದೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಹಿಂದಿನ ಹಣಕಾಸು ವರ್ಷದ ಅವಧಿಗೆ ಹೋಲಿಸಿದರೆ ಏಪ್ರಿಲ್‌ನಿಂದ ಡಿಸೆಂಬರ್ 2022 ರವರೆಗೆ ಪ್ರಯಾಣಿಕರ ದಟ್ಟಣೆಯಲ್ಲಿ ಶೇಕಡಾ 97.5 ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಿಳಿಸಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ 2022ರ ಹಣಕಾಸು ವರ್ಷದ ಮುಕ್ಕಾಲು ಭಾಗದ ಪ್ರಯಾಣಿಕರ ದಟ್ಟಣೆ ಕುರಿತ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ವರದಿಯಲ್ಲಿ ಈ ಹಣಕಾಸು ವರ್ಷದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಭಾರೀ ಏರಿಕೆಯಾಗಿರುವುದು ಕಂಡು ಬಂದಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ 7.12 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದರು. ಆದರೆ, ಈ ವರ್ಷ 27.53 ಲಕ್ಷ ಪ್ರಯಾಣಿಕರು ಪ್ರಯಾಣಿಸಿರುವುದು ಕಂಡು ಬಂದಿದೆ.

ಡಿಸೆಂಬರ್ ಹಬ್ಬಗಳ ತಿಂಗಳಾಗಿದ್ದು, ಈ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಇದು 2021 ರ ಡಿಸೆಂಬರ್'ನ ಅಂಕಿ ಅಂಶಕ್ಕಿಂತ ದ್ವಿಗುಣವಾಗಿದ್ದು, ಅಂಕಿಅಂಶಗಳ ಪ್ರಕಾರ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2.27 ಕೋಟಿ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಸಿರುವುದು ತಿಳಿದುಬಂದಿದೆ. 2021-2022 ರಲ್ಲಿ ಕೇವಲ 1.15 ಕೋಟಿ ಮಂದಿ ಪ್ರಯಾಣಿಸಿರುವುದು ಕಂಡು ಬಂದಿದೆ.

ಆದರೆ ಡಿಸೆಂಬರ್ 2021 ಕ್ಕೆ ಹೋಲಿಸಿದರೆ ಡಿಸೆಂಬರ್ 2022 ರಲ್ಲಿ ರಾಜ್ಯ ಇತರೆ ಎರಡು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತ ಕಂಡು ಬಂದಿದೆ. ಕಲಬುರಗಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತವಾಗಿರುವುದು ಕಂಡು ಬಂದಿದೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುಮಾರು 2,000 ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 9,000ದಷ್ಟು ಕಡಿಮೆಯಾಗಿರುವುದು ಕಂಡು ಬಂದಿದೆ.

ವಿಮಾನಯಾನ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ಅವರು ಮಾತನಾಡಿ, ಲಾಕ್ಡೌನ್ ತೆಗೆದುಹಾಕಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಅವರು ಮಾತನಾಡಿ, ದೆಹಲಿ, ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಸ್ಪೈಸ್‌ಜೆಟ್‌ ಕಾರ್ಯಾಚರಣೆಯನ್ನು ನಿಲ್ಲಿಸಿರುವುದು ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT