ಸಾಂದರ್ಭಿಕ ಚಿತ್ರ 
ರಾಜ್ಯ

ಕೌಟುಂಬಿಕ ಕಲಹ: ವಿಜಯಪುರದಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳ ಜೊತೆಗೆ ನೀರಿನ ಸಂಪಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. 

ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳ ಜೊತೆಗೆ ನೀರಿನ ಸಂಪಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. 

ತಾಯಿ ಗೀತಾ ತನ್ನ ಮೂವರು ಮಕ್ಕಳೊಂದಿಗೆ ಮಧ್ಯರಾತ್ರಿ ವೇಳೆ ಮನೆಯ ಎದುರು ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ರಾತ್ರಿ ಗೀತಾ ಮತ್ತು ಆಕೆಯ ಪತಿ ರಾಮು ಮಧ್ಯೆ ತೀವ್ರ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ತೀವ್ರ ನೊಂದಿದ್ದ ಗೀತಾ ಮಧ್ಯರಾತ್ರಿ ವೇಳೆ ಮಕ್ಕಳನ್ನು ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಜಯಪುರ ತಿಕೋಟಾ ತಾಲ್ಲೂಕಿನ ವಿಠಲವಾಡಿ ತಾಂಡಾದಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನು ತಾಯಿ ಗೀತಾ ರಾಮು ಚೌವ್ಹಾಣ್ (32), ಮಕ್ಕಳಾದ ಸೃಷ್ಟಿ (6), ಕಿಶನ್ (3), ಸಮರ್ಥ (4) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ತಿಕೋಟಾ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್