ಸಂಗ್ರಹ ಚಿತ್ರ 
ರಾಜ್ಯ

ಕಳಪೆ ಸ್ಥಿತಿಯಲ್ಲಿರುವ 340 ಆ್ಯಂಬುಲೆನ್ಸ್ ವಾಹನಗಳ ಸೇವೆ ಸ್ಥಗಿತಗೊಳಿಸಲು ಆರೋಗ್ಯ ಇಲಾಖೆ ಮುಂದು!

ಕಳಪೆ ಸ್ಥಿತಿಗೆ ತಲುಪಿರುವ ರಾಜ್ಯದಲ್ಲಿ '108' ಆಂಬ್ಯುಲೆನ್ಸ್ ಸೇವೆಯಡಿ ಚಾಲನೆಯಲ್ಲಿರುವ 340 ಆಂಬ್ಯುಲೆನ್ಸ್‌ಗಳನ್ನು ಸ್ಥಗಿತಗೊಳಿಸಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ,

ಬೆಂಗಳೂರು: ಕಳಪೆ ಸ್ಥಿತಿಗೆ ತಲುಪಿರುವ ರಾಜ್ಯದಲ್ಲಿ '108' ಆಂಬ್ಯುಲೆನ್ಸ್ ಸೇವೆಯಡಿ ಚಾಲನೆಯಲ್ಲಿರುವ 340 ಆಂಬ್ಯುಲೆನ್ಸ್‌ಗಳನ್ನು ಸ್ಥಗಿತಗೊಳಿಸಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ,

ನಿಯಮಿತ ಕಾರ್ಯವಿಧಾನದಂತೆ ಆಂಬ್ಯುಲೆನ್ಸ್‌ಗಳನ್ನು ಬದಲಾಯಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

4 ಲಕ್ಷ ಕಿಲೋಮೀಟರ್ ದೂರವನ್ನು ಕ್ರಮಿಸುವ ಎಲ್ಲಾ ಆಂಬ್ಯುಲೆನ್ಸ್‌ಗಳನ್ನು ನಾಲ್ಕು ವರ್ಷಗಳಲ್ಲಿ ಬದಲಾಯಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಪನಿರ್ದೇಶಕ (ಇಎಂಆರ್ಐ-108) ಡಾ ಆರ್ ನಾರಾಯಣ್ ಅವರು ಮಾತನಾಡಿ, 2015-16ರಲ್ಲಿ ಕಳಪೆ ಸ್ಥಿತಿಗೆ ತಲುಪಿದ್ದ ಆ್ಯಂಬುಲೆನ್ಸ್ ಗಳನ್ನು ಬದಲಾಯಿಸಲಾಗಿತ್ತು. ಪ್ರಸ್ತುತ ಬದಲಿಸಲು ಮುಂದಾಗಿರುವ 340 ಆ್ಯಂಬುಲೆನ್ಸ್ ಗಳು ಸುಮಾರಿ 7 ವರ್ಷಗಳಷ್ಟು ಹಳೆಯದ್ದಾಗಿವೆ. ಹೀಗಾಗಿ ಅವುಗಳನ್ನು ಬದಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಆ್ಯಂಬುಲೆನ್ಸ್ ಗಳ ಬದಲಾವಣೆ ಮಾಡುವ ಸಮಯದಲ್ಲಿ ಸೇವೆಗಳಲ್ಲಿ ಯಾವುದೇ ವ್ಯತ್ಯಯಗಳು ಕಂಡು ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಜಿವಿಕೆ-ಇಎಂಆರ್'ಐ ಕಳೆದ 14 ವರ್ಷಗಳಿಂದ ರಾಜ್ಯದಲ್ಲಿ '108' ಆಂಬ್ಯುಲೆನ್ಸ್ ಸೇವೆಯನ್ನು ಸೇವೆಯನ್ನು ಒದಗಿಸುತ್ತಿದೆ. ಹೊಸ ಆಂಬುಲೆನ್ಸ್ ಖರೀದಿ ಕುರಿತ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. 3-4 ತಿಂಗಳುಗಳಲ್ಲಿ ಹೊಸ ಆ್ಯಂಬುಲೆನ್ಸ್ ಗಳು ರಸ್ತೆಗಿಳಿಯಲಿವೆ ಎಂದು ಹೇಳಿದ್ದಾರೆ.

ಈ ಹಿಂದೆ, ಆಂಬ್ಯುಲೆನ್ಸ್‌ಗಳ ನಿಯಮಗಳು ಮತ್ತು ಗುಣಮಟ್ಟ ಪರಿಶೀಲನೆಗಳು ಹೆಚ್ಚು ಕಟ್ಟುನಿಟ್ಟಾಗಿರಲಿಲ್ಲ. ಇದೀಗ, ಗುಣಮಟ್ಟದ ಸೇವೆಯನ್ನು ಒದಗಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ಖಚಿತಪಡಿಸಿಕೊಳ್ಳಲು ಕಂಪನಿಗಳು ಕಟ್ಟುನಿಟ್ಟಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರೂಪಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ಹೊಸ ಸೇವಾ ಪೂರೈಕೆದಾರರೊಂದಿಗೆ ರಾಜ್ಯಕ್ಕೆ ಉತ್ತಮ ಗುಣಮಟ್ಟದ ಆಂಬ್ಯುಲೆನ್ಸ್‌ಗಳನ್ನು ಒದಗಿಸುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT