ವೈರಲ್ ವಿಡಿಯೋದ ಸ್ಕ್ರೀನ್‌ಶಾಟ್ 
ರಾಜ್ಯ

ಹಾಸನ: ಖಾಸಗಿ ಶಾಲೆಯ ಎಡವಟ್ಟು; ಬಕ್ರೀದ್ ಹಿನ್ನೆಲೆ ಶಾಲೆಯಲ್ಲಿ ಮಕ್ಕಳಿಂದ ಸಾಮೂಹಿಕ ನಮಾಜ್!

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಬಕ್ರೀದ್ ಆಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಇಸ್ಲಾಮಿಕ್ ಪ್ರಾರ್ಥನೆಗಳನ್ನು ಪಠಿಸಿರುವುದು ವಿವಾದವನ್ನು ಹುಟ್ಟುಹಾಕಿದೆ.

ಹಾಸನ: ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಬಕ್ರೀದ್ ಆಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಇಸ್ಲಾಮಿಕ್ ಪ್ರಾರ್ಥನೆಗಳನ್ನು ಪಠಿಸಿರುವುದು ವಿವಾದವನ್ನು ಹುಟ್ಟುಹಾಕಿದೆ.

ಚನ್ನರಾಯಪಟ್ಟಣದ ಜ್ಞಾನಸಾಗರ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯನ್ನು ಖಂಡಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. 

ಹಿಂದೂಗಳು ಮತ್ತು ಕ್ರಿಶ್ಚಿಯನ್ ವಿದ್ಯಾರ್ಥಿಗಳು ಕುರಾನ್ ಪದ್ಯಗಳನ್ನು ಪಠಿಸುವಂತೆ ಮಾಡುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿವಾದದ ನಂತರ, ಶಾಲಾ ಆಡಳಿತವು ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸುವುದಿಲ್ಲ ಎಂದು ಶನಿವಾರ ಭರವಸೆ ನೀಡಿದೆ.

ನೂರಾರು ಮಕ್ಕಳಿಗೆ ಕುರಾನ್ ಶ್ಲೋಕಗಳನ್ನು ಪಠಿಸುವಂತೆ ಮಾಡಲಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳಿಗೆ ನಮಾಜ್ ಮಾಡುವಂತೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. 

ಬಕ್ರೀದ್ ಹಬ್ಬದಂದು ವಿದ್ಯಾರ್ಥಿಗಳು ಪಠಿಸುವುದನ್ನು ಮತ್ತು ಶಿಕ್ಷಕರು ಅದರ ಕುರಿತು ಭಾಷಣ ಮಾಡುವುದು ವಿಡಿಯೋದಲ್ಲಿ ಸೆರೆಯಾಗಿದೆ. 

ಕುರಾನ್ ಶ್ಲೋಕಗಳನ್ನು ಹೇಳುವಂತೆ ಮಕ್ಕಳನ್ನು ಬಲವಂತ ಮಾಡಿಲ್ಲ ಮತ್ತು ನಮಾಜ್ ಮಾಡಿಸಿಲ್ಲ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. 

ಧಾರ್ಮಿಕ ಹಬ್ಬಗಳ ಆಚರಣೆಯನ್ನು ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿಕ್ಷಕರು ಹೇಳಿದ್ದಾರೆ. ಮುಸ್ಲಿಂ ಸಮುದಾಯದ ಮೂವರು ಮಕ್ಕಳು ಮಾತ್ರ ನಮಾಜ್ ಮಾಡಿದರು. ಇತರರು ಕಣ್ಣು ಮುಚ್ಚಿಕೊಂಡು ಕುಳಿತರು. ಇದು ಬಕ್ರೀದ್ ಮಾತ್ರವಲ್ಲ, ವಿವಿಧ ಧರ್ಮಗಳ ಎಲ್ಲಾ ಹಬ್ಬಗಳ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಆದರೆ, ಸೋಮವಾರ ನಡೆದ ಘಟನೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT