ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದ ಎಲ್ಲಾ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳ ರಕ್ಷಿಸಲಾಗುವುದು: ಸಿಎಂ ಸಿದ್ದರಾಮಯ್ಯ

ರಾಜ್ಯದ ಎಲ್ಲ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲಾಗುವುದು ಮತ್ತು ಆ ಸಮುದಾಯಗಳಿಗೆ ಸೇರಿದವರಿಗೆ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಭರವಸೆ ನೀಡಿದರು.

ಸಿಎಂ ಸಿದ್ದರಾಮಯ್ಯ
Manjula VN
Updated On : 1 Jul 2023, 1:27 pm

ಬೆಂಗಳೂರು: ರಾಜ್ಯದ ಎಲ್ಲ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲಾಗುವುದು ಮತ್ತು ಆ ಸಮುದಾಯಗಳಿಗೆ ಸೇರಿದವರಿಗೆ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಭರವಸೆ ನೀಡಿದರು.

ಪ್ರತ್ಯೇಕ ನಿಯೋಗದಲ್ಲಿ ಕ್ರೈಸ್ತ ಮತ್ತು ಮುಸ್ಲಿಂ ಸಮುದಾಯದ ಸದಸ್ಯರು ಶುಕ್ರವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಇಂಡಿಯನ್ ಕ್ರಿಶ್ಚಿಯನ್ ಫೋರಮ್ ಪರವಾಗಿ ಪಾದ್ರಿಗಳ ನಿಯೋಗ ಮತ್ತು ವಿವಿಧ ಕ್ರಿಶ್ಚಿಯನ್ ಸಂಘಟನೆಗಳ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

Advertisement

Advertisement

ಇದನ್ನೂ ಓದಿ: ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ರೂಪಿಸಿದ್ದ ಕಾರ್ಯಕ್ರಮಗಳು ಪುನರಾರಂಭ: ಸಿಎಂ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಮತಾಂತರ ತಡೆ ಕಾಯ್ದೆ ಅಸಂವಿಧಾನಿಕ ಎಂದಿರುವ ಹೇಳಿದ ಮುಖ್ಯಮಂತ್ರಿಗಳು, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಕಾಯಿದೆಗೆ ತಂದಿರುವ ತಿದ್ದುಪಡಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ನಿಯೋಗಕ್ಕೆ ತಿಳಿಸಿದರು.

ಇದೇ ವೇಳೆ ಮತಾಂತರ ತಡೆ ಕಾಯ್ದೆಯಡಿ ಪಾದ್ರಿಗಳ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದ ಮುಖ್ಯಮಂತ್ರಿಗಳು, ಬಜೆಟ್‌ನಲ್ಲಿ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ, ಮುಸ್ಲಿಂ ಸಮುದಾಯದ ಸದಸ್ಯರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. ಈಗಾಗಲೇ ಕಾಂಗ್ರೆಸ್‌ ಭರವಸೆಗಳನ್ನು ಜಾರಿಗೊಳಿಸಲಾಗುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments