ಜಗದೀಶ್ ಶೆಟ್ಟರ್ ಅವರಿಗೆ ಅಭಿನಂದೆ ಸಲ್ಲಿಸುತ್ತಿರುವ ಸಿಎಂ. 
ರಾಜ್ಯ

ವಿಧಾನ ಪರಿಷತ್​ ಸದಸ್ಯರಾಗಿ ಕಾಂಗ್ರೆಸ್​ನ ಮೂವರು ಪ್ರಮಾಣವಚನ ಸ್ವೀಕಾರ

ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು: ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು  ಅವರು ಪ್ರಮಾಣವಚನ ಸ್ವೀಕರಿಸಿದರು.

ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನಲ್ಲಿ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಬಳಿಕ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಇದ್ದರು.

ಈ ನಡುವೆ ವಿಧಾನಮಂಡಲ​​​ ಅಧಿವೇಶನಕ್ಕೆ ಕ್ಷಣಗಣನೆ ಶುರುವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.

ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್​ ಮಂಡಿಸಲಿದ್ದು, ಒಟ್ಟು 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT