ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಪಘಾತ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 3 Jul 2023, 7:42 pm

ಬೆಂಗಳೂರು: ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಮೃತ ವಿದ್ಯಾರ್ಥಿನಿಯನ್ನು ಎಂಇಎಸ್ ಕಾಲೇಜ್ ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದಿಶಾ(18) ಎಂದು ಗುರುತಿಸಲಾಗಿದೆ.

ದಿಶಾ ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು, ತಂದೆ-ಮಗಳು ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಮಗಳು ದಿಶಾ ಸಾವನಪ್ಪಿದ್ದು, ತಂದೆ ಗಾಯಗೊಂಡಿದ್ದಾರೆ.

Advertisement

Advertisement

ಇದನ್ನು ಓದಿ: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಕಾರು ಢಿಕ್ಕಿ ಹೊಡೆದು ಪೊಲೀಸ್ ಪೇದೆ ಸಾವು​

ಗಂಭೀರವಾಗಿ ಗಾಯಗೊಂಡಿರುವ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement