ಸಂಗ್ರಹ ಚಿತ್ರ 
ರಾಜ್ಯ

ಬಿಲ್ ಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು: ಬೆಸ್ಕಾಂ

ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಸೆಪ್ಟೆಂಬರ್​ 30ರೊಳಗೆ ವಿದ್ಯುತ್​ ಬಾಕಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಆಗಸ್ಟ್​​ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದೆ.

ಜುಲೈ 25ರಿಂದ ಆಗಸ್ಟ್​​ 25ರೊಳಗೆ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಸೆಪ್ಟೆಂಬರ್ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. ಯೋಜನೆಗೆ ಅರ್ಹರಾಗಲು ಸರಾಸರಿ 200 ಯೂನಿಟ್ ಮೀರಬಾರದು ಎಂದು ತಿಳಿಸಿದೆ.

ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್​ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ, ಯೋಜನೆಯ ಪ್ರಯೋಜನವನ್ನು ಅವರು, ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ. ಯೋಜನೆಯ ನೋಂದಣಿಗೆ ವಿಳಂಬ ಬೇಡ. ಇಂದೇ ನೋಂದಾಯಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT