ಹಾಸನ: ಚನ್ನರಾಯಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ನಟೋರಿಯಸ್ ರೌಡಿಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣ ಎಂಬಾತನನ್ನು ಹಾಡುಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪಟ್ಟಣದ ಬಿಎಂ ರಸ್ತೆಯಲಿರುವ ಧನಲಕ್ಷ್ಮೀ ಚಿತ್ರಮಂದಿರದ ಮುಂಭಾಗದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳ ತಂಡ ಮಾಸ್ತಿಗೌಡನನ್ನು ಹತ್ಯೆ ಮಾಡಿ ಪರಾರಿಯಾಗಿದೆ.
ಮಾಸ್ತಿಗೌಡ ಕಾನೂನು ಬಾಹಿರ ಚಟುವಟಿಕೆ ಆರೋಪದಡಿ ಗಡಿಪಾರಾಗಿ ಸದ್ಯ ಕಲಬುರಗಿ ಜೈಲಿನಲ್ಲಿರುವ ಮತ್ತೊಬ್ಬ ರೌಡಿ ಶೀಟರ್ ಯಾಚೇನಹಳ್ಳಿ ಚೇತುವಿನ ಮಾಜಿ ಶಿಷ್ಯನಾಗಿದ್ದು ಈತ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು.
ಇದನ್ನೂ ಓದಿ: ಬೆಂಗಳೂರು: ನನ್ನ ಸಾವಿಗೆ ಪತಿ ಮತ್ತು ಆತನ ಗರ್ಲ್ ಫ್ರೆಂಡ್ ಕಾರಣ; ವಾಟ್ಸಾಪ್ ಸ್ಟೇಟಸ್ ಹಾಕಿ ಗೃಹಿಣಿ ನೇಣಿಗೆ ಶರಣು
ಇನ್ನು ಮಾಸ್ತಿಗೌಡನ ಬರ್ಬರ ಕೊಲೆಯಿಂದ ಇದೀಗ ಚನ್ನರಾಯಪಟ್ಟಣ ಜನತೆ ಬೆಚ್ಚಿ ಬಿದ್ದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಚನ್ನರಾಯಪಟ್ಟಣ ಡಿವೈಎಸ್ಪಿ ರವಿಪ್ರಸಾದ್, ನಗರ ಠಾಣೆ ಇನ್ಸ್‌ಪೆಕ್ಟರ್ ಕೆ.ಎಂ. ವಸಂತ್, ಶ್ವಾನದಳ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.