ಬಿಎಸ್ ಯಡಿಯೂರಪ್ಪ 
ರಾಜ್ಯ

ಬಿಜೆಪಿ ವಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷ ನೇಮಕ: ಇಂದು ಘೋಷಣೆಯಾಗುವ ಸಾಧ್ಯತೆ; ಬಿಎಸ್ ಯಡಿಯೂರಪ್ಪ

ಬಹು ನಿರೀಕ್ಷಿತ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಸ್ಥಾನಗಳ ಕುರಿತು ಬುಧವಾರದಂದು ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.

ಬೆಂಗಳೂರು: ಬಹು ನಿರೀಕ್ಷಿತ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಸ್ಥಾನಗಳ ಕುರಿತು ಬುಧವಾರದಂದು ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ನಾಯಕರು ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕರು ಮತ್ತು ನಾಯಕರ ಅಭಿಪ್ರಾಯವನ್ನು ತೆಗೆದುಕೊಂಡಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದರು.

ಈ ಕುರಿತು ಇಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಮತ್ತು ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದರು.

ವೀಕ್ಷಕರಾಗಿ ರಾಜ್ಯಕ್ಕೆ ಬಂದಿರುವ ಬಿಜೆಪಿಯ ಹಿರಿಯ ನಾಯಕರಾದ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ಪಕ್ಷದ ಹೈಕಮಾಂಡ್‌ಗೆ ತಮ್ಮ ವರದಿಯನ್ನು ಸಲ್ಲಿಸಲಿದ್ದಾರೆ ಎಂದು ಮೂಲಗಳು ವಿವರಿಸಿವೆ. ಮಂಗಳವಾರ ತಡರಾತ್ರಿಯವರೆಗೂ ವೀಕ್ಷಕರು ಪ್ರತಿ ಶಾಸಕರು ಮತ್ತು ಪಕ್ಷದ ಮುಖಂಡರ ಅಭಿಪ್ರಾಯವನ್ನು ಪಡೆದರು.

ವಿರೋಧ ಪಕ್ಷದ ನಾಯಕನ ಘೋಷಣೆ ವಿಳಂಬವಾಗಿರುವುದರಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಈ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ಹೀಗಾಗಿ, ದಿನದ ಅಂತ್ಯದ ವೇಳೆಗೆ ಹೈಕಮಾಂಡ್ ವಿಪಕ್ಷ ನಾಯಕನ ಘೋಷಣೆ ಮಾಡುವ ಸಾಧ್ಯತೆಯಿದೆ.

ಎಲ್‌ಒಪಿ ರೇಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂಚೂಣಿಯಲ್ಲಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ. ಈ ಇಬ್ಬರೂ ಅಭ್ಯರ್ಥಿಗಳನ್ನು ಯಡಿಯೂರಪ್ಪ ಬೆಂಬಲಿಸಿದ್ದಾರೆ.

ಎಲ್‌ಒಪಿ ಸ್ಥಾನಕ್ಕೆ ಮಾಜಿ ಸಚಿವ ಹಾಗೂ ಆರ್‌ಎಸ್‌ಎಸ್‌ನ ವಿ. ಸುನೀಲ್ ಕುಮಾರ್, ಮಾಜಿ ಸಚಿವ ಎಸ್. ಸುರೇಶ್ ಕುಮಾರ್, ಬಿಜೆಪಿ ಶಾಸಕರಾದ ಅರವಿಂದ್ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್, ಆರ್. ಅಶೋಕ ಅವರನ್ನು ಪಕ್ಷ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT