ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು. 
ರಾಜ್ಯ

ಕಾಂಗ್ರೆಸ್ ಖಾತರಿಗಳ ಅನುಷ್ಠಾನದ ಮೇಲಿನ ಚರ್ಚೆಗೆ ಸ್ಪೀಕರ್ ಸಮಯ ನಿಗದಿ; ಪ್ರತಿಭಟನೆ ಹಿಂತೆಗೆದುಕೊಂಡ ಬಿಜೆಪಿ

ಕಾಂಗ್ರೆಸ್‌ನ ಐದು 'ಖಾತರಿ'ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿ, ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು. 

ಬೆಂಗಳೂರು: ಕಾಂಗ್ರೆಸ್‌ನ ಐದು 'ಖಾತರಿ'ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿ, ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು. 

ಕಾಂಗ್ರೆಸ್‌ ನೀಡಿರುವ ಯಾವ ಖಾತರಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಈ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ನೋಟಿಸ್ ನೀಡಿದ್ದೇವೆ. ಪ್ರಶ್ನೋತ್ತರ ಕಲಾಪವನ್ನು ಬದಿಗೊತ್ತಿ ಈ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಅಶೋಕ ಆಗ್ರಹಿಸಿದರು. 

ನಿಯಮಗಳ ಪ್ರಕಾರ, ಪ್ರಶ್ನೋತ್ತರ, ಶೂನ್ಯವೇಳೆಯ ಬಳಿಕವೇ ಚರ್ಚೆಗೆ ಅವಕಾಶ ನೀಡಲು ಸಾಧ್ಯ. ಪ್ರಶ್ನೋತ್ತರಕ್ಕೆ ಸಹಕರಿಸಿ ಎಂದು ಸಭಾಧ್ಯಕ್ಷರು ಮನವಿ ಮಾಡಿದರು. ಇದು ಮಂಗಳವಾರ ಕಲಾಪಕ್ಕೆ ಅಡ್ಡಿಯುಂಟಾಯಿತು. ಅಲ್ಲದೆ, ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಕೋಲಾಹಲಕ್ಕೆ ಕಾರಣವಾಯಿತು.

ಈ ವಿಷಯದ ಬಗ್ಗೆ ಚರ್ಚೆ ನಡೆಸಬೇಕು ಎಂಬ ತಮ್ಮ ಬೇಡಿಕೆಗೆ ಬಿಜೆಪಿ ಸದಸ್ಯರು ಪಟ್ಟು ಹಿಡಿದರು.

ಇಂದು ಬೆಳಗ್ಗೆ ಕಲಾಪ ಆರಂಭವಾದ ಕೂಡಲೇ ಬಿಜೆಪಿ ಶಾಸಕರು ಈ ವಿಷಯದ ಬಗ್ಗೆ ಚರ್ಚೆಗೆ ಕಾಲಾವಕಾಶ ಕೋರಿದರು.
ಬಳಿಕ ಶೂನ್ಯವೇಳೆ ನಂತರ ಸಮಯಾವಕಾಶ ನೀಡಲು ಸ್ಪೀಕರ್ ಯುಟಿ ಖಾದರ್ ಒಪ್ಪಿಗೆ ಸೂಚಿಸಿದ ಬಳಿಕ ಬಿಜೆಪಿ ಪ್ರತಿಭಟನೆ ಹಿಂಪಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!