ಉಡುಪಿಯಲ್ಲಿ ಭಾರಿ ಮಳೆ 
ರಾಜ್ಯ

ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ, ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್

ಕರಾವಳಿ ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.

ದಕ್ಷಿಣಕನ್ನಡ: ಕರಾವಳಿ ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.

ಹೌದು.. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಗುರುವಾರವೂ ಧಾರಾಕಾರ ಮಳೆಯಾಗುವ ಸೂಚನೆಯಿದೆ. ಇನ್ನು ನಿರಂತರ ಮಳೆ ಸುರಿಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ಮೇ 6(ಗುರುವಾರ) ರಂದು ರಜೆ ಘೋಷಿಸಲಾಗಿದ್ದರೆ, ಉಡುಪಿ ಜಿಲ್ಲೆಯಲ್ಲೂ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.

ಹವಾಮಾನ ವರದಿಯ ಪ್ರಕಾರ ಕರಾವಳಿಯ ಗುರುವಾರಂದು 13 ಕಡೆಗಳಲ್ಲಿ ಅತಿ ಭಾರೀ ಮಳೆ, 11 ಕಡೆ ಭಾರೀ ಮಳೆ ಮತ್ತು ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ತಲಾ 3 ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಬುಧವಾರದಂದು ದಕ್ಷಿಣ ಗುಜರಾತ್ ನಿಂದ ಉತ್ತರ ಕೇರಳದ ಕರಾವಳಿಗೆ ಸೇರಿರುವ ಸಮುದ್ರ ಪ್ರದೇಶದಲ್ಲಿ ವಾಯುಭಾರ ಕುಸಿತದಿಂದಾಗಿ ಇನ್ನೂ 5 ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. 

ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್
ಮೇ 6 ಗುರುವಾರದಂದು ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಗದಗ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೇ 7ರಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  ಬುಧವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹೊನ್ನಾವರ ಮತ್ತು ಶಿರಾಲಿಯಲ್ಲಿ ತಲಾ 18 ಸೆಂ.ಮೀ. ಮಳೆಯಾಗಿದ್ದು, ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 17 ಸೆಂ.ಮೀ, ಬೆಳ್ತಂಗಡಿಯಲ್ಲಿ 16 ಸೆಂ.ಮೀ ಮಳೆಯಾಗಿದ್ದರೆ ಉಡುಪಿ ಜಿಲ್ಲೆಯ ಉಡುಪಿ ಮತ್ತು ಕಾರ್ಕಳದಲ್ಲಿ ತಲಾ 15 ಸೆಂ.ಮೀ. ಮಳೆ ಸುರಿದಿದೆ.

ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯ ಉಧೋಣಿಯಲ್ಲಿ 11 ಸೆಂ.ಮೀ, ಬೀದರ್ ಜಿಲ್ಲೆ ನಿರ್ಣಾದಲ್ಲಿ 10 ಸೆಂ.ಮೀ, ಕಲಬುರಗಿ ಜಿಲ್ಲೆಯ ಅಡಕೆಯಲ್ಲಿ 10 ಸೆಂ.ಮೀ. ಮಳೆಯಾಗಿದೆ. ಇನ್ನು ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ, ಕೊಡಗು ಜಿಲ್ಲೆ ಭಾಗಮಂಡಲದಲ್ಲಿ 8 ಸೆಂ.ಮೀ, ಚಿಕ್ಕಮಗಳೂರು ಜಿಲ್ಲೆ ಕಮ್ನಾಡಿಯಲ್ಲಿ 7 ಸೆಂ.ಮೀ. ಮಳೆಯಾಗಿದೆ. ಅದು ಬಿಟ್ಟರೆ ಹೆಚ್ಚಿನ ಕಡೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT