ಸಿಎಂ ಸಿದ್ದರಾಮಯ್ಯ 
ರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಸೂಚನೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಮಳೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಮುಖ್ಯಮಂತ್ರಿ ಸೂಚಿಸಿದ್ದು, ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!