ಬಾಬು ಜಗಜೀವನ್ ರಾಂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿ- ಸಿಎಂ ಸಿದ್ದರಾಮಯ್ಯ

ಬಾಬು ಜಗಜೀವನ್ ರಾಂ ಅವರ  ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಬಾಬು ಜಗಜೀವನ್ ರಾಂ ಅವರ  ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಸಿರು ಕ್ರಾಂತಿಯ ಹರಿಹಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್‍ ರಾಮ್ ರವರ 37 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರ ಬಳಿ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಭಾರತದಲ್ಲಿ ನೆಹರು ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ, ದೇಶದ ಮೊದಲ ಉಪ ಪ್ರಧಾನಿಯಾಗಿದ್ದ ಬಾಬು ಜಗಜೀವನ್ ರಾಮ್ ಅವರು, ದಕ್ಷ ಆಡಳಿತಗಾರರು. ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಆಹಾರ ಸ್ವಾಲಂಬಲನೆಯಾಗಲು ಕಾರಣಕರ್ತರು ಎಂದರು. 

ಯಾವುದೇ ಇಲಾಖೆಯಲ್ಲಿದ್ದರೂ ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು.  ಅವರ ಬದುಕು ನಮಗೆ ಪ್ರೇರಣೆಯಾಗಬೇಕು ಎಂದರು.  ಅಂಥ ಮಹಾನುಭಾವರ ಪುಣ್ಯಸ್ಮರಣೆ ಮಾಡಿದ್ದು, ಅವರು ನಮಗೆಲ್ಲರಿಗೂ ಮಾರ್ಗದರ್ಶಕರು.  ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT