ರಾಜ್ಯ

ವಿಜಯಪುರದಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

Manjula VN

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನವಾಗಿದ್ದು, ತಡರಾತ್ರಿ 1:38ರ ಸುಮಾರಿಗೆ ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಜನರು ಬೆಚ್ಚಿ ಬಿದ್ದಿದ್ದಾರೆ.

ರಿಕ್ಟರ್ ಮಾಪಕದಲ್ಲಿ 3.4 ಭೂಕಂಪನದ ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ(ಕೆಎಸ್ ಎನ್ ಡಿಎಂಸಿ) ಖಚಿತ ಪಡಿಸಿದೆ.

ವಿಜಯಪುರ ನಗರ ಹೊರವಲಯದ ಐನಾಪುರ ಗ್ರಾಮ ಭೂಕಂಪನದ ಕೇಂದ್ರ ಬಿಂದುವಾಗಿದ್ದು, ಭೂಮಿಯ 3 ಕಿ.ಮೀ ಆಳದಲ್ಲಿ ಭೂಕಂಪನವಾಗಿದೆ. ಇದರಿಂದ ಗಾಡ ನಿದ್ರೆಯಲ್ಲಿದ್ದ ಜನರು ಬೆಚ್ಚಿಬಿದ್ದಿದ್ದಾರೆ.

ಜಿಲ್ಲೆಯಲ್ಲಿ ಪದೇ ಪದೇ ಲಘು ಭೂಕಂಪನ ಆಗುತ್ತಿದ್ದು, ಇದರ ಬಗ್ಗೆ ಇದುವರೆಗೂ ಖಚಿತ ಕಾರಣ ತಿಳಿದುಬಂದಿಲ್ಲ.  ಇದುವರೆಗೆ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಈ ಕುರಿತು ಇದೂವರೆಗೆ ಯಾವುದೇ ವೈಜ್ಞಾನಿಕ ಅಧ್ಯಯನಗಳೂ ನಡೆದಿಲ್ಲ.

SCROLL FOR NEXT