ಸಂಗ್ರಹ ಚಿತ್ರ 
ರಾಜ್ಯ

ಭೂಗಳ್ಳರ ವಿರುದ್ಧ ಕಠಿಣ ಕ್ರಮ: ರಾಜ್ಯ ಸರ್ಕಾರ ಭರವಸೆ

ಕಂದಾಯ ಭೂಮಿ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಹೇಳಿದ್ದಾರೆ.

ಬೆಂಗಳೂರು: ಕಂದಾಯ ಭೂಮಿ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಹೇಳಿದ್ದಾರೆ.

ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ಕರ್ನಾಟಕದಲ್ಲಿ 2,82,130 ಎಕರೆ ಕಂದಾಯ ಭೂಮಿ ಒತ್ತುವರಿಯಾಗಿದೆ. ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಕರ್ನಾಟಕ ಭೂಕಂದಾಯ ಕಾಯ್ದೆಯಡಿ ನೋಟಿಸ್ ಜಾರಿ ಮಾಡಿ, ಪ್ರಕರಣ ದಾಖಲಿಸಿ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಸರಕಾರ ಅತಿಕ್ರಮಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳಿಂದ ವರದಿ ಕೇಳಿದೆ. ಅಧಿಕಾರಿಗಳ ಕೈವಾಡವಿಲ್ಲದೆ ಅತಿಕ್ರಮಣ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರವು 2019 ರಿಂದ ವಿವಿಧ ಸಂಸ್ಥೆಗಳಿಗೆ ಗೋಮಾಳ ಭೂಮಿಯನ್ನು ಮಂಜೂರು ಮಾಡಿದ್ದು, ನಿಯಮ ಉಲ್ಲಂಘಿಸಿ ಅಥವಾ ಅನರ್ಹ ಸಂಸ್ಥೆಗಳಿಗೆ ಭೂಮಿ ಮಂಜೂರು ಮಾಡಿರುವ ಪ್ರಕರಣಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ವೇಳೆ ಭೂಮಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶರವಣ ಅವರು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ