ಬೀದರ್: ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ಆಟೋ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ.
ಹುಮನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತರನ್ನು 28 ವರ್ಷದ ಅಂಕುಶ್ ಹುಚ್ಚೇನೂರ್ ಅವರ ಮಕ್ಕಳಾದ 6 ವರ್ಷದ ತನು ಹಾಗೂ 5 ವರ್ಷದ ಸಾಯಿರಾಜ್ ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದ್ದು ಹುಮನಾಬಾದ್ ಪೊಲೀಸರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಮೇಲೆತ್ತಿದ್ದಾರೆ.