ಎನ್.ಚಲುವರಾಯಸ್ವಾಮಿ 
ರಾಜ್ಯ

ರಾಜಕೀಯ ದ್ವೇಷದಿಂದ ವರ್ಗಾವಣೆ: ಚಲುವರಾಯ ಸ್ವಾಮಿ ವಿರುದ್ಧ ಆರೋಪಿಸಿ ಕೆಎಸ್ ಆರ್ ಟಿಸಿ ಡ್ರೈವರ್ ಆತ್ಮಹತ್ಯೆ ಯತ್ನ

ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್​ಆರ್​​ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋದಲ್ಲಿ ನಡೆದಿದೆ.

ಮಂಡ್ಯ: ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್​ಆರ್​​ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋದಲ್ಲಿ ನಡೆದಿದೆ.

ಅಸ್ವಸ್ಥಗೊಂಡಿರುವ ಜಗದೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವರ್ಗಾವಣೆಯಿಂದ ಬೇಸತ್ತು ಚಾಲಕ ಜಗದೀಶ್​ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಒಂದು ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪದ ಮೇಲೆ ನಾಗಮಂಗಲದ ಕೆಎಸ್ಆರ್​ಟಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಾಲಕ ಕಂ ನಿರ್ವಾಹಕ ಹೆಚ್.ಆರ್ ಜಗದೀಶ್ ಅವರನ್ನು ರಾಜಕೀಯ ಒತ್ತಡದ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ  ಜಗದೀಶ್ ಅವರಿಗೆ ವರ್ಗಾವಣೆ ಆದೇಶ ನೀಡಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ವರ್ಗಾವಣೆ ಆದೇಶ ತೆಗೆದುಕೊಳ್ಳದೇ ಜಗದೀಶ್ ನಾಗಮಂಗಲ ಬಸ್ ಡಿಪೋ ಮುಂದೆಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಷ ಸೇವಿಸಿದ ಜಗದೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಇಲ್ಲಿನ ಸಿಬ್ಬಂದಿ ಯತ್ನಿಸಿದರೂ ವರ್ಗಾವಣೆ ಆದೇಶ ರದ್ದುಗೊಳಿಸುವವರೆಗೂ ಹೋಗುವುದಿಲ್ಲ ಎಂಬುದಾಗಿ ಹಠ ಹಿಡಿದಿದ್ದಾರೆ. ಕೊನೆಗೆ ಜಗದೀಶ್​ ಅವರ ಮನವೊಲಿಸಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನನ್ನ ವರ್ಗಾವಣೆಗೆ ರಾಜಕೀಯ ಒತ್ತಡವೇ ಕಾರಣ. ರಾಜಕೀಯ ದ್ವೇಷದಿಂದ ನನ್ನನ್ನು ವರ್ಗಾವಣೆ ಮಾಡಲಾಗಿದೆ ಎಂದು ಎಂದು ಜಗದೀಶ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಪೋ ಉಸ್ತುವಾರಿ ಮಂಜುನಾಥ್​​, ಚಾಲಕ ಜಗದೀಶ್ ಮಹಿಳಾ ಪ್ರಯಾಣಿಕರ ಜೊತೆ ಅನುಚಿತ ವರ್ತನೆ ತೋರಿರುವುದಾಗಿ ದೂರು ಬಂದಿತ್ತು. ಆ ದೂರಿನ ಅನ್ವಯ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಚಾಲಕನನ್ನು ಮೈಸೂರಿನ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಎಚ್. ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. 

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ಬಗ್ಗೆ ಕ್ರಮಕೈಗೊಳ್ಳಲಿ. ತಮ್ಮ ರಾಜಕೀಯ ತೆವಲಿಗೆ ಅಮಾಯಕರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಗದೀಶ್ ಸದ್ಯ ವೆಂಟಿಲೇಟರ್‌ನಲ್ಲಿ ಇದ್ದಾರೆ. ಸರ್ಕಾರ ಬಂದು ಐವತ್ತು ದಿನ ಆಗಿಲ್ಲ. ವರ್ಗಾವಣೆ ಮಾಡಿಕೊಳ್ಳುವುದಾದರೆ ಮಾಡಿಕೊಳ್ಳಲಿ. ಆದರೆ ಈ ರೀತಿ ಮಾಡುವುದು ಸರಿಯಲ್ಲ. ಜಗದೀಶ್ ಪತ್ನಿ ಪಂಚಾಯತಿ ಸದಸ್ಯರು. ಆಗಲೇ ದ್ವೇಷ ರಾಜಕಾರಣ ಆರಂಭಿಸಿದ್ದಾರೆ. ಊರಿನಲ್ಲಿರುವ ಮಹದೇವ ಎಂಬ ರೌಡಿ ಜಗದೀಶ್​ ಕುಟುಂಬಕ್ಕೆ ಕಿರುಕುಳ ನೀಡಿದ್ದಾನೆ. ಈ ಹೆಣ್ಣು ಮಗಳು ಜೆಡಿಎಸ್ ಪಕ್ಷ ಬಿಡುವಂತೆ, ಕಾಂಗ್ರೆಸ್ ಸೇರುವಂತೆ ಒತ್ತಡ ಏರಿದ್ದಾನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT