ಯುಟಿ ಖಾದರ್. 
ರಾಜ್ಯ

ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ: ಸ್ಪೀಕರ್ ಯುಟಿ ಖಾದರ್

ಕಲಾಪದ ಎಲ್ಲಾ ದಿನಗಳಲ್ಲೂ ನಿಗದಿತ ಸಮಯಕ್ಕೆ ಬರುವ ಶಾಸಕರಿಗೆ ಬಹುಮಾನ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಬುಧವಾರ ಹೇಳಿದರು.

ಬೆಂಗಳೂರು: ಕಲಾಪದ ಎಲ್ಲಾ ದಿನಗಳಲ್ಲೂ ನಿಗದಿತ ಸಮಯಕ್ಕೆ ಬರುವ ಶಾಸಕರಿಗೆ ಬಹುಮಾನ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಬುಧವಾರ ಹೇಳಿದರು.

ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ್ದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಕೌಜಲಗಿ ಮಹಾಂತೇಶ್, ಎಸ್ ಸುರೇಶ್ ಕುಮಾರ್, ಪ್ರದೀಪ್ ಈಶ್ವರ್, ಎಸ್ ಆರ್ ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಶಿವಲಿಂಗೇಗೌಡ ಸೇರಿದಂತೆ ಇತರ ಶಾಸಕರ ಹೆಸರು ಓದಿದ ಸ್ಪೀಕರ್ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ನೀಡಲಾಗುವುದು ಎಂದು ಸ್ಪೀಕರ್ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರೊಬ್ಬರು, ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ ಶಾಸಕರಿಗೆ ಬಹುಮಾನ ಕೊಟ್ಟರೆ ತಪ್ಪು ಸಂದೇಶ ಹೋಗುತ್ತದೆ. ಬಹುಮಾನ ಘೋಷಣೆ ಬದಲಾಗಿ ಸರ್ಟಿಫಿಕೇಟ್ ಕೊಡಲು ಮನವಿ ಮಾಡಿದರು. ಇದಕ್ಕೆ ಸ್ಪೀಕರ್ ಸಮ್ಮತಿ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ