ವಿಭೂತಿಪುರ ಕೆರೆ ಸ್ವಚ್ಥತಾ ಕಾರ್ಯ 
ರಾಜ್ಯ

ಬೆಂಗಳೂರು: ವಿಭೂತಿಪುರ ಕೆರೆ ಸ್ವಚ್ಛಗೊಳಿಸಿದ ಸ್ವಯಂಸೇವಕರು; 5 ದಿನಗಳ ನಂತರ ಕಸ ಸುರಿದ ಯುವಕರು!

ವಿಭೂತಿಪುರ ಕೆರೆ ಕ್ಷೇಮಾಭಿವೃದ್ಧಿ ಸಂಘದ ಸ್ವಯಂಸೇವಕರು ಹಾಗೂ ಸಮೀಪದ ಬಡಾವಣೆಗಳ ನಾಗರಿಕರು ವಿಭೂತಿಪುರ ಕೆರೆಯ ಸುತ್ತಮುತ್ತ ಸ್ವಚ್ಛಗೊಳಿಸಿ ಸಸಿಗಳನ್ನು ನೆಟ್ಟು ಐದು ದಿನಗಳ ನಂತರ ಇಬ್ಬರು ಯುವಕರು ಪ್ಲಾಸ್ಟಿಕ್ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: ವಿಭೂತಿಪುರ ಕೆರೆ ಕ್ಷೇಮಾಭಿವೃದ್ಧಿ ಸಂಘದ ಸ್ವಯಂಸೇವಕರು ಹಾಗೂ ಸಮೀಪದ ಬಡಾವಣೆಗಳ ನಾಗರಿಕರು ವಿಭೂತಿಪುರ ಕೆರೆಯ ಸುತ್ತಮುತ್ತ ಸ್ವಚ್ಛಗೊಳಿಸಿ ಸಸಿಗಳನ್ನು ನೆಟ್ಟು ಐದು ದಿನಗಳ ನಂತರ ಇಬ್ಬರು ಯುವಕರು ಪ್ಲಾಸ್ಟಿಕ್ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಸಿಕ್ಕಿಬಿದ್ದ ನಂತರ  ತಮ್ಮ ಕೃತ್ಯವನ್ನು ಸಮರ್ಥಿಸಿಕೊಳ್ಳಲು ಯತ್ನಿಸಿದ್ದಾರೆ, ಅದು ಕೇವಲ ಪೂಜಾ ಸಾಮಗ್ರಿಗಳು ಎಂದು ಹೇಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವಿಷಯವನ್ನು ಸ್ವಯಂಸೇವಕರು ಕೂಡಲೇ ಬಿಬಿಎಂಪಿ ಮುಖ್ಯ ಇಂಜಿನಿಯರ್ (ಕೆರೆ) ವಿಜಯಕುಮಾರ್ ಹರಿದಾಸ್ ಅವರ ಗಮನಕ್ಕೆ ತಂದರು, ಅವರು ಸಮಸ್ಯೆಯನ್ನು ಪರಿಶೀಲಿಸಲು ಸಂಬಂಧಿಸಿದ ಎಂಜಿನಿಯರ್ ಗಳಿಗೆ ಸೂಚಿಸುವುದಾಗಿ ತಿಳಿಸಿದ್ದಾರೆ. ಈ ಸಂಬಂಧ  ಯುವಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹರಿದಾಸ್ ತಿಳಿಸಿದ್ದಾರೆ.

ಸ್ವಯಂಸೇವಕರು ಮತ್ತು ಯುವಕರ ನಡುವಿನ ಘರ್ಷಣೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆರೆಗಳಿಗೆ ತ್ಯಾಜ್ಯ ಸುರಿಯುವುದು ಉಲ್ಲಂಘನೆಯಾಗಿದೆ. ನಾವು ಈ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದೇವೆ ಮತ್ತು ಕೆರೆಯ ಆವರಣದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಬಗ್ಗೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳನ್ನು ಸಹ ಮಾಡಿದ್ದೇವೆ.

ಘಟನೆಯ ಬಗ್ಗೆ ಎಫ್‌ಐಆರ್ ದಾಖಲಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಹರಿದಾಸ್ ಹೇಳಿದರು. ನಗರದಾದ್ಯಂತ ಎಲ್ಲಾ ಕೆರೆಗಳಲ್ಲಿ ಹೆಚ್ಚುವರಿಯಾಗಿ ಗೃಹರಕ್ಷಕ ದಳದಂತಹ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಹರಿದಾಸ್ ತಿಳಿಸಿದ್ದಾರೆ.

ಕೆರೆಗೆ ಕಾಯಕಲ್ಪ ನೀಡುವ ಕಾರ್ಯದಲ್ಲಿ ತೊಡಗಿದ್ದ ತಲಕಾವೇರಿ ಲೇಔಟ್ ನಿವಾಸಿ ಬಿ.ಪಿ.ಎ.ಸಿ ಸದಸ್ಯೆ ಸತ್ಯವಾಣಿ ಶ್ರೀಧರ್, ಜನರು ಕಸ ಸುರಿಯುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ಹೋರಾಟದ ನಂತರ ಕೆರೆಗೆ ಜೀವ ಬಂದಿದೆ.

ಕಳೆದ ಶನಿವಾರ ಮತ್ತು ಭಾನುವಾರ ವೀರಭದ್ರನಗರ, ಬೃಂದಾವನ ಲೇಔಟ್ ಮತ್ತು ಸಮೀಪದ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳು ಕೆರೆ ಪ್ರದೇಶವನ್ನು ಸ್ವಚ್ಛಗೊಳಿಸಿ ಸಸಿಗಳನ್ನು ನೆಟ್ಟರು.  ಬಿಬಿಎಂಪಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಕೆರೆಗೆ ಬೇಲಿ ಹಾಕಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT