ಕರ್ನಾಟಕ ಹೈಕೋರ್ಟ್ 
ರಾಜ್ಯ

ಪ್ರಧಾನಿ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸುವುದು ಅವಹೇಳನಕಾರಿ ಹೊರತು ದೇಶದ್ರೋಹವಲ್ಲ: ಹೈಕೋರ್ಟ್

ಶಾಲಾ ಆಡಳಿತ ಮಂಡಳಿಯ ವಿರುದ್ಧದ ದೇಶದ್ರೋಹ ಪ್ರಕರಣವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಪ್ರಧಾನ ಮಂತ್ರಿಯ ವಿರುದ್ಧ ಅವಹೇಳನಕಾರಿ ಮತ್ತು ಬೇಜವಾಬ್ದಾರಿಯಿಂದ ನಿಂದನೀಯ ಪದಗಳನ್ನು ಬಳಸಲಾಗಿದೆ. ಆದರೆ, ಅದು ದೇಶದ್ರೋಹವನ್ನು ಒಳಗೊಂಡಿಲ್ಲ ಎಂದು ಹೇಳಿದೆ.

ಬೆಂಗಳೂರು: ಶಾಲಾ ಆಡಳಿತ ಮಂಡಳಿಯ ವಿರುದ್ಧದ ದೇಶದ್ರೋಹ ಪ್ರಕರಣವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಪ್ರಧಾನ ಮಂತ್ರಿಯ ವಿರುದ್ಧ ಅವಹೇಳನಕಾರಿ ಮತ್ತು ಬೇಜವಾಬ್ದಾರಿಯಿಂದ ನಿಂದನೀಯ ಪದಗಳನ್ನು ಬಳಸಲಾಗಿದೆ. ಆದರೆ, ಅದು ದೇಶದ್ರೋಹವನ್ನು ಒಳಗೊಂಡಿಲ್ಲ ಎಂದು ಹೇಳಿದೆ.

ಬೀದರ್‌ನ ಶಾಹೀನ್ ಶಾಲಾ ಆಡಳಿತ ಮಂಡಳಿಯ ಅಲ್ಲಾವುದ್ದೀನ್, ಅಬ್ದುಲ್ ಖಲೀಕ್, ಮಹಮ್ಮದ್ ಬಿಲಾಲ್ ಇನಾಮದಾರ್ ಮತ್ತು ಮಹಮ್ಮದ್ ಮೆಹತಾಬ್ ವಿರುದ್ಧ ಬೀದರ್ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ಕಲಬುರ್ಗಿ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ರದ್ದುಗೊಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 (ಎ) ಅಂಶಗಳು ಪ್ರಕರಣದಲ್ಲಿ ಕಂಡುಬಂದಿಲ್ಲ. ಪ್ರಧಾನಿಗೆ ಪಾದರಕ್ಷೆಯಿಂದ ಹೊಡೆಯಬೇಕು ಎಂಬ ನಿಂದನೀಯ ಮಾತುಗಳು ಅವಹೇಳನಕಾರಿ ಮಾತ್ರವಲ್ಲ, ಬೇಜವಾಬ್ದಾರಿಯಿಂದ ಕೂಡಿರುವಂತದ್ದಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

'ಸರ್ಕಾರದ ನೀತಿಗಳ ಬಗ್ಗೆ ರಚನಾತ್ಮಕ ಟೀಕೆಗಳನ್ನು ಮಾಡುವುದು ಸ್ವೀಕಾರಾರ್ಹ. ಆದರೆ, ಕೆಲವು ಜನರು ವಿರೋಧಿಸಬಹುದಾದಂತ ನೀತಿಗಳ ನಿರ್ಧಾರಗಳನ್ನು ತೆಗೆದುಕೊಂಡಿದ್ದಕ್ಕೆ ಸಾಂವಿಧಾನಿಕ ಕಾರ್ಯನಿರ್ವಾಹಕರನ್ನು ಅವಮಾನಿಸಲು ಅಥವಾ ಅಗೌರವಿಸಲು ಅನುಮತಿ ಇಲ್ಲ. ವ್ಯಕ್ತಿಗಳನ್ನು ಗುರಿಯಾಗಿಸುವ ಬದಲು ನೀತಿಗಳನ್ನು ಚರ್ಚಿಸುವುದರತ್ತ ಗಮನ ಹರಿಸಬೇಕು' ಎಂದು ನ್ಯಾಯಮೂರ್ತಿ ಚಂದನಗೌಡರ್ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.

'ಮಕ್ಕಳು ಪ್ರದರ್ಶಿಸಿದ ನಾಟಕವು ಸರ್ಕಾರದ ವಿವಿಧ ಕಾನೂನುಗಳನ್ನು ಟೀಕಿಸಿದೆ ಎಂದು ಆರೋಪಿಸಲಾಗಿದೆ ಮತ್ತು ಅಂತಹ ಕಾನೂನುಗಳನ್ನು ಜಾರಿಗೊಳಿಸಿದರೆ, ಮುಸ್ಲಿಮರು ದೇಶವನ್ನು ತೊರೆಯಬೇಕಾಗುತ್ತದೆ' ಎಂದು ಆರೋಪಿಸಿದರೂ, 'ಶಾಲೆಯ ಆವರಣದಲ್ಲಿ ನಾಟಕವನ್ನು ಪ್ರದರ್ಶಿಸಲಾಗಿದೆ ಎಂಬುದನ್ನು ಹೈಕೋರ್ಟ್ ಗಮನಿಸಿದೆ.

ನಾಟಕದಲ್ಲಿ ಹಿಂಸಾಚಾರವನ್ನು ಆಶ್ರಯಿಸಲು ಅಥವಾ ಸಾರ್ವಜನಿಕ ಅಶಾಂತಿಯನ್ನು ಸೃಷ್ಟಿಸಲು ಮಕ್ಕಳನ್ನು ಪ್ರಚೋದಿಸುವ ಯಾವುದೇ ಪದಗಳಿಲ್ಲ. ಆರೋಪಿಗಳಲ್ಲಿ ಒಬ್ಬರು ನಾಟಕವನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ನಾಟಕವನ್ನು ಅಪ್‌ಲೋಡ್ ಮಾಡಿದಾಗ ಮಾತ್ರ ಇದು ಸಾರ್ವಜನಿಕರಿಗೆ ತಿಳಿಯಿತು ಎಂದು ಹೈಕೋರ್ಟ್ ತಿಳಿಸಿದೆ.

ಹೀಗಾಗಿ, ಅರ್ಜಿದಾರರು ಹೇಳಿರುವಂತೆ, ಸರ್ಕಾರದ ವಿರುದ್ಧ ಹಿಂಸಾಚಾರದಲ್ಲಿ ತೊಡಗಿಸಿಕೊಳ್ಳಲು ಅಥವಾ ಸಾರ್ವಜನಿಕ ಅಶಾಂತಿಯನ್ನು ಸೃಷ್ಟಿಸುವುದಕ್ಕಾಗಿ ನಾಟಕವನ್ನು ಪ್ರದರ್ಶಿಸಿದ್ದಾರೆ ಹೇಳಲು ಸಾಧ್ಯವಿಲ್ಲ. ಹೀಗಾಗಿ, ನಾಟಕದ ಹಿಂದಿನ ಉದ್ದೇಶವು ಹಿಂಸಾಚಾರ ಅಥವಾ ಅಶಾಂತಿ ಸೃಷ್ಟಿಸುವ ನಡವಳಿಕೆಯನ್ನು ಉತ್ತೇಜಿಸುತ್ತದೆ ಎಂದು ತಪ್ಪಾಗಿ ಗ್ರಹಿಸಬಾರದು. ಹೀಗಾಗಿ, ಸೆಕ್ಷನ್ 124 ಎ (ದೇಶದ್ರೋಹ) ಮತ್ತು ಸೆಕ್ಷನ್ 505 (2) ರ ಅಡಿಯಲ್ಲಿ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಗೊಳಿಸಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ.

2020ರ ಜನವರಿ 21ರಂದು ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಪ್ರಜೆಗಳ ರಾಷ್ಟ್ರೀಯ ನೋಂದಣಿ (ಎನ್ಆರ್‌ಸಿ) ಕುರಿತು ಬೀದರ್‌ನ ಶಾಹೀನ್ ಶಾಲೆಯ 4, 5 ಮತ್ತು 6 ನೇ ತರಗತಿಯ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿದ್ದರು. ಈ ಸಂಬಂಧ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು. 

ಈ ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವ ಸಂಭಾಷಣೆ ಇತ್ತು ಎಂದು ಎಬಿವಿಪಿ ಸದಸ್ಯ ನೀಲೇಶ್ ರಕ್ಷ್ಯಾಲ್ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 504, 505 (2), 124 (ಎ) ಮತ್ತು 153 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT