ಗೃಹ ಸಚಿವ ಡಾ.ಜಿ.ಪರಮೇಶ್ವರ್ 
ರಾಜ್ಯ

ಕೆಎಸ್‌ಆರ್‌ಟಿಸಿ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನ ಪ್ರಕರಣ; ಗೃಹ ಇಲಾಖೆಯಿಂದ ತನಿಖೆ: ಡಾ. ಜಿ ಪರಮೇಶ್ವರ್‌

ಕೆಎಸ್‌ಆರ್‌ಟಿಸಿ ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನಿಸಿರುವ ಪ್ರಕರಣ ಸಂಬಂಧ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಗೃಹ ಇಲಾಖೆ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಭರವಸೆ ನೀಡಿದರು.

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನಿಸಿರುವ ಪ್ರಕರಣ ಸಂಬಂಧ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಗೃಹ ಇಲಾಖೆ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಭರವಸೆ ನೀಡಿದರು.

16ನೇ ವಿಧಾನಸಭೆಯ ನಾಲ್ಕನೇ ದಿನದ ಕಲಾಪದಲ್ಲಿ ಇಡೀ ದಿನದ ಚರ್ಚೆ ಬಹುತೇಕವಾಗಿ ಸಾರಿಗೆ ಇಲಾಖೆ ನೌಕರನ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಕುರಿತಂತೆಯೇ ಹೆಚ್ಚು ಚರ್ಚೆಗಳು ನಡೆದವು. ಈ ವೇಳೆ ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ಜಟಾಪಟಿಗೂ ಸದನ ಸಾಕ್ಷಿಯಾಯಿತು. ಎರಡು ಬಾರಿ ಸಭಾಧ್ಯಕ್ಷರು ಈ ವಿಚಾರದಲ್ಲಿ ಸದನ ಮುಂದೂಡಿದ್ದು ನಡೆಯಿತು.

ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾರಿಗೆ ಇಲಾಖೆ ನೌಕರ ಆತ್ಮಹತ್ಯೆಗೆ ಪ್ರಯತ್ನಿಸಿರುವ ಪ್ರಕರಣ ಬಗ್ಗೆ ತನಿಖೆಯಾಗಿ ಸತ್ಯ ಹೊರಬರಬೇಕೆಂಬುದಷ್ಟೇ ನಮ್ಮ ಆಗ್ರಹ ಎಂದು ಸದನದ ಮುಂದೆ ಬೇಡಿಕೆ ಇಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರು, ಕುಮಾರಸ್ವಾಮಿ ಅನುಭವಸ್ಥರು. ಚೆಲುವರಾಯಸ್ವಾಮಿ ಜೊತೆ ಕೆಲಸ ಮಾಡಿದ್ದರು. ಚರ್ಚೆ ಗಮನಿಸಿದಾಗ ಇತಿ ಮಿತಿ ಇರಬೇಕು ಆಗ ಸದನಕ್ಕೆ ಗೌರವ ಬರಲಿದೆ" ಎಂದರು. ಆದರೆ, ಇಂದು ಎರಡು ಕಡೆಯಿಂದ ಸ್ಬಲ್ಪ ಅತಿಯಾಯಿತು ಅನ್ನಿಸಿದೆ. ಇದು ಮರುಕಳಿಸಬಾರದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸುತ್ತೇವೆ. ಕೆಎಸ್ಆರ್​ಟಿಸಿ ಇಲಾಖೆ ಹಿರಿಯ ಅಧಿಕಾರಿಗಳನ್ನು ಒಳಗೊಂಡು ತನಿಖೆ ನಡೆಸಿ ವರದಿ ತರಿಸುತ್ತೇವೆಂದು ಹೇಳಿದರು.

ಪೊಲೀಸ್ ಅಧಿಕಾರಿಗಳಿಂದ ತನಿಖೆಗೆ ಸರ್ಕಾರ ನಿರ್ಧಾರ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಧರಣಿ ವಾಪಸ್ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕನ ಕುಟುಂಬಕ್ಕೆ ಪರಿಹಾರ ಹಾಗೂ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT