ರಾಜ್ಯ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಪ್ರಗತಿಯಲ್ಲಿ: ಸಂಪುಟ ಸಚಿವರು, ಶಾಸಕರು ಭಾಗಿ

Sumana Upadhyaya

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ 7ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವಿಧಾನ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ನ್ನು ಮಂಡಿಸಲಿದ್ದು ಅದಕ್ಕೂ ಮುನ್ನ ವಿಧಾನ ಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸುತ್ತಿದ್ದಾರೆ.

ಸದನದಲ್ಲಿ ಒಗ್ಗಟ್ಟು ಪ್ರದರ್ಶಿಸುವಂತೆ ಶಾಸಕರಿಗೆ ಸಿಎಂ ಸೂಚನೆ ನೀಡಿದ್ದು, ಗ್ಯಾರಂಟಿಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಲು ಕಿವಿಮಾತು ಹೇಳಿದ್ದಾರೆ. ಶಾಸಕಾಂಗ ಸಭಯಲ್ಲಿ ಎಲ್ಲರೂ ಕಡ್ಡಾಯವಾಗಿ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಈಗಾಗಲೇ ಸಭೆಗೆ ಶಾಸಕರು, ಸಚಿವರು ಆಗಮಿಸಿದ್ದಾರೆ.

ಸಭೆಯಲ್ಲಿ ಸಿಎಂ ಅವರ ಜೊತೆಗೆ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಡಾ ಜಿ ಪರಮೇಶ್ವರ್ ಸೇರಿದಂತೆ ಸಂಪುಟದ ಸದಸ್ಯರು, ಶಾಸಕರು ಭಾಗಿಯಾಗಿದ್ದಾರೆ. 

ಸಿಎಂ ಸಿದ್ದರಾಮಯ್ಯ ಅವರು ಇಂದು 14ನೇ ಬಾರಿ ಬಜೆಟ್ ಮಂಡಿಸಲು ಹೊರಟಿದ್ದು, ಅವರು ಮಂಡಿಸಿದ ಮೊದಲ ಆಯವ್ಯಯದ ಗಾತ್ರ 12,616 ಕೋಟಿ ರೂಪಾಯಿ ಆಗಿತ್ತು. 13ನೇ ಆಯವ್ಯಯದ ಗಾತ್ರ 2,09,181 ಕೋಟಿ ಆಗಿತ್ತು. ಈ ಬಾರಿಯ 14ನೇ ಆಯವ್ಯಯದ ಗಾತ್ರ 3,35,000 ಕೋಟಿ‌ ಆಗಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ ಅಂದಾಜಿಸಿದ್ದಾರೆ.

SCROLL FOR NEXT