ಸಂಗ್ರಹ ಚಿತ್ರ 
ರಾಜ್ಯ

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ; ಗದ್ದೆಯಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಮುಳುಗಿ ಇಬ್ಬರು ಸಾವು

ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಗುರುವಾರ ರಾತ್ರಿ ಇಬ್ಬರು ಸಾವಿಗೀಡಾಗಿದ್ದಾರೆ. ಸತೀಶ ಎಂಬುವವರಿಗೆ ಸೇರಿದ ಗದ್ದೆಗೆ ಬೇಲಿ ಹಾಕಲು ತೆರಳಿದ್ದ ವೇಳೆ ಘಟನೆ ನಡೆದಿದ್ದು, ಪೋಸ್ಟ್ ಬೆಟ್ಕುಳಿ ಗ್ರಾಮದವರಾದ ಸತೀಶ ನಾಯ್ಕ (39), ಉಲ್ಲಾಸ ಗಾವಡಿ (60) ಮೃತಪಟ್ಟಿದ್ದಾರೆ.

ಕಾರವಾರ: ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಗುರುವಾರ ರಾತ್ರಿ ಇಬ್ಬರು ಸಾವಿಗೀಡಾಗಿದ್ದಾರೆ.

ಸತೀಶ ಎಂಬುವವರಿಗೆ ಸೇರಿದ ಗದ್ದೆಗೆ ಬೇಲಿ ಹಾಕಲು ತೆರಳಿದ್ದ ವೇಳೆ ಘಟನೆ ನಡೆದಿದ್ದು, ಪೋಸ್ಟ್ ಬೆಟ್ಕುಳಿ ಗ್ರಾಮದವರಾದ ಸತೀಶ ನಾಯ್ಕ (39), ಉಲ್ಲಾಸ ಗಾವಡಿ (60) ಮೃತಪಟ್ಟಿದ್ದಾರೆ.

ಅಘನಾಶಿನಿ ನದಿ ನೀರಿನ ಮಟ್ಟ ಏರಿಕೆಯಾದ ಕಾರಣ ಗದ್ದೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿತ್ತು. ಬೇಲಿ ಹಾಕುವ ವೇಳೆ ಉಲ್ಲಾಸ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾರೆ. ಈವೇಳೆ ಅವರನ್ನು ರಕ್ಷಿಸಲು ಮುಂದಾದ ಸತೀಶ ಕೂಡ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಗೋಕರ್ಮ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ಜೀವಹಾನಿಯಾದ ಎರಡನೇ ಪ್ರಕರಣ ಇದಾಗಿದೆ. ಜುಲೈ 5ರಂದು ಕಾರವಾರ ತಾಲ್ಲೂಕಿನ ಅರ್ಗಾ ಗ್ರಾಮದಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

SCROLL FOR NEXT