ರಾಜ್ಯ

7ನೇ ವೇತನ ಸಮಿತಿ ಜಾರಿ ರಾಜ್ಯದ ಹಣಕಾಸಿನ ಸ್ಥಿತಿಗತಿಯ ಮೇಲೆ ಅವಲಂಬಿತ: ಸಿಎಂ ಸಿದ್ದರಾಮಯ್ಯ

Manjula VN

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸ್ಸುಗಳ ಅನುಷ್ಠಾನದ ನಿರ್ಧಾರವು ರಾಜ್ಯದ ಆರ್ಥಿಕತೆಯನ್ನು ಅವಲಂಬಿಸಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸು ಹಾಗೂ ರಾಜ್ಯದ ಆರ್ಥಿಕ ಸ್ಥಿತಿಗತಿ ನೋಡಿಕೊಂಡು ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು. ನೌಕರರ ಹಿತಾಸಕ್ತಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ ಕುರಿತು ರಚಿಸಿರುವ ಏಳನೇ ವೇತನ ಆಯೋಗ ಅಂತಿಮ ವರದಿ ನೀಡಲು ಆರು ತಿಂಗಳ ಕಾಲಾವಕಾಶ ಕೋರಿದ್ದು, ಅಂತಿಮ ವರದಿ ಪರಿಶೀಲಿಸಿ ರಾಜ್ಯದ ಹಣಕಾಸು ಸ್ಥಿತಿಗತಿ ನೋಡಿಕೊಂಡು ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕೇಂದ್ರದ ವೇತನ ಬೇರೆ, ಅವರು ಹತ್ತು ವರ್ಷಕ್ಕೆ ಒಮ್ಮೆ ವೇತನ ಆಯೋಗ ಮಾಡಲಿದ್ದಾರೆ. ನಾವು ಐದು ವರ್ಷಕ್ಕೆ ಮಾಡುತ್ತಿದ್ದೇವೆ, ಕೆಲವೊಮ್ಮೆ ಒಂದೆರಡು ವರ್ಷ ವ್ಯತ್ಯಾಸ ಆಗಿದೆ, ಆಯೋಗ ರಚನೆಗೂ ಮೊದಲು ವೇತನ ಸಮಿತಿ ಇತ್ತು. ಅದರ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಆಗುತ್ತಿತ್ತು, ಈಗ ಆಯೋಗದ ಅಂತಿಮ ವರದಿ ಬಂದ ನಂತರ ಅದನ್ನು ಪರಿಶೀಲಿಸಿ ಹಣಕಾಸು ಸ್ಥಿತಿಗತಿ ನೋಡಿಕೊಂಡು ಆಯೋಗದ ಶಿಫಾರಸು ಅನುಷ್ಠಾನಕ್ಕೆ ತರಲಿದ್ದೇವೆ. ಈಗಾಗಲೇ ಸರ್ಕಾರಿ ನೌಕರರಿಗೆ ಪೂರ್ವಾನ್ವಯವಾಗುವಂತೆ ಮಧ್ಯಂತರ ಪರಿಹಾರ ಕೊಡಲಾಗಿದೆ. ಈಗ ಅಂತಿಮ ವರದಿ ನೋಡಿ ಅನುಷ್ಠಾನ ಮಾಡಲಿದ್ದೇವೆ ಎಂದು ಹೇಳಿದರು.

ಐದು ಗ್ಯಾರಂಟಿ ಕೊಡುತ್ತಿದ್ದೇವೆ, ಇದನ್ನೂ ಕೊಡುತ್ತೇವೆ. ವೇತನ ಆಯೋಗದವರು ಸಮಯ ಪಡೆದಿದ್ದಾರೆ. ಅವರಿಗೆ ಈಗಲೇ ವರದಿ ಕೊಡಿ ಎನ್ನಲಾಗುತ್ತಾ? ವರದಿ ಬರುತ್ತಿದ್ದಂತೆ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.

SCROLL FOR NEXT